ಸಮಸ್ಯೆ ಹೇಳಲು ಬಂದ ಮಹಿಳೆ ಮೇಲೆ ಶಾಸಕ ಅರವಿಂದ್ ಲಿಂಬಾವಳಿ ದರ್ಪ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ | MLA Arvind Limbavali Darpa on a woman who came to raise a problem: Video viral on social media


ಸಮಸ್ಯೆ ಹೇಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಬೈದಿದ್ದಾರೆ ಎಂದು ಆರೋಪ ಮಾಡಲಾಗಿದೆ. ಬೆಂಗಳೂರಿನ ವರ್ತೂರು ಕೆರೆ ಕೋಡಿ ವೀಕ್ಷಣೆ ವೇಳೆ ಘಟನೆ ನಡೆದಿದೆ.

ಸಮಸ್ಯೆ ಹೇಳಲು ಬಂದ ಮಹಿಳೆ ಮೇಲೆ ಶಾಸಕ ಅರವಿಂದ್ ಲಿಂಬಾವಳಿ ದರ್ಪ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ, ಮಹಿಳೆ

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Sep 03, 2022 | 11:18 AM
ಬೆಂಗಳೂರು: ಸಮಸ್ಯೆ ಹೇಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಬೈದಿದ್ದಾರೆ ಎಂದು ಆರೋಪ ಮಾಡಲಾಗಿದೆ. ಬೆಂಗಳೂರಿನ ವರ್ತೂರು ಕೆರೆ ಕೋಡಿ ವೀಕ್ಷಣೆ ವೇಳೆ ಘಟನೆ ನಡೆದಿದೆ. ಮಹಿಳೆಗೆ ಬೈದಿರುವ ಎನ್ನಲಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಳೆ ಹಾನಿ ವೀಕ್ಷಣೆ ವೇಳೆ ಮನವಿ ಸಲ್ಲಿಸಲು ಮಹಿಳೆ ಬಂದಿದ್ದರು. ಮನವಿ ಪತ್ರ ಕಸಿದುಕೊಂಡು ಮಹಿಳೆಗೆ ಆವಾಜ್ ಹಾಕಿದ ಆರೋಪ ಮಾಡಲಾಗಿದೆ. ನಿನಗೆ ಮಾನ ಮರ್ಯಾದೆ ಏನಾದ್ರೂ ಇದ್ಯಾ? ನಾಚಿಕೆ ಆಗಲ್ವಾ? ಮಹಿಳೆಯನ್ನು ಠಾಣೆಗೆ ಕರೆದೊಯ್ದು ಕೂರಿಸಿ ಎಂದು ಶಾಸಕರು ಆವಾಜ್​ ಹಾಕಿದ್ದಾರೆ ಎನ್ನಲಾಗುತ್ತಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.