ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ; ಹೆಚ್​ಡಿ ಕುಮಾರಸ್ವಾಮಿಗೆ ಸತೀಶ್ ಜಾರಕಿಹೊಳಿ ತಿರುಗೇಟು | Congress Leader Satish Jarkiholi Hits Back to Former CM HD Kumaraswamy over Allegation on Siddaramaiah

ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ; ಹೆಚ್​ಡಿ ಕುಮಾರಸ್ವಾಮಿಗೆ ಸತೀಶ್ ಜಾರಕಿಹೊಳಿ ತಿರುಗೇಟು

ಸತೀಶ್ ಜಾರಕಿಹೊಳಿ

ಹಾವೇರಿ: ವಿರೋಧ ಪಕ್ಷದ ಸ್ಥಾನಕ್ಕಾಗಿ ಸಿದ್ದರಾಮಯ್ಯ ನಮ್ಮ ಸರ್ಕಾರವನ್ನು ಬೀಳಿಸಿದರು ಎಂಬ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ಸಮ್ಮಿಶ್ರ ಸರ್ಕಾರ ಪತನವಾಗಿ ಮತ್ತೊಂದು ಸರ್ಕಾರ ಬಂದಿದೆ. ಸಮ್ಮಿಶ್ರ ಸರ್ಕಾರ ಏಕೆ ಬಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರ ಪತನವಾಗಿರುವ ಬಗ್ಗೆ ಈಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಹೆಚ್​​ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಕಾಂಗ್ರೆಸ್ ಮುಳುಗುವ ಹಡಗು ಎಂಬ ಆರೋಪದ ವಿಚಾರವಾಗಿ ಬಿಜೆಪಿಯ ಆರೋಪಕ್ಕೆ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಏನಾಗಿದೆ?, ಬಿಜೆಪಿಯವರ ಪರಿಸ್ಥಿತಿ ಏನಾಗಿದೆ? ಎಂದು ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ. ಯಾರನ್ನೂ ಯಾರೂ ಮುಳುಗಿಸುವುದಕ್ಕೆ ಆಗುವುದಿಲ್ಲ. ಮತದಾರರು ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

ಮಂಗಳವಾರ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದ ಹೆಚ್​ಡಿ ಕುಮಾರಸ್ವಾಮಿ, ಸರ್ಕಾರ ಬೀಳುತ್ತಿದೆ ಬನ್ನಿ ಎಂದು ಕರೆದರೂ ಕುಮಾರಸ್ವಾಮಿ ಬರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಅದ್ಯಾವ ನಂಬರ್​ಗೆ ಫೋನ್ ಮಾಡಿದ್ದರೋ ಎಂಬುದರ ಮಾಹಿತಿ ನೀಡಲಿ. ನಾನೇ ಗೃಹ ಸಚಿವ ಪರಮೇಶ್ವರ್​ಗೆ ಫೋನ್ ಮಾಡಿದ್ದೆ. ಅವರೇ ನನಗೆ ಆರಾಮಾಗಿ ಬನ್ನಿ, ಏನೂ ಆಗುವುದಿಲ್ಲ ಎಂದಿದ್ದರು. ಆದರೆ, ಸಿದ್ದರಾಮಯ್ಯ ನನ್ನ ಸರ್ಕಾರವನ್ನು ಬೀಳಿಸುವ ಹುನ್ನಾರ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಿತ್ತು. ಈ ಸರ್ಕಾರ ನಡೆಯುತ್ತದೋ ಇಲ್ಲವೋ ಎಂಬುದನ್ನು ಸಿದ್ದರಾಮಯ್ಯ ಹೇಳಿದ್ದನ್ನು ನಾನೇ ನೋಡಿದ್ದೇನೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಬುಡಕ್ಕೆ ಬೆಂಕಿ ಇಡುವುದು ಸಿದ್ದರಾಮಯ್ಯನವರೇ! ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಬಿಜೆಪಿಗೆ ಹೋಗುವಂತೆ ನಮಗೆ ಸಿದ್ದರಾಮಯ್ಯ ಹೇಳಿರಲಿಲ್ಲ; ಕುಮಾರಸ್ವಾಮಿಗೆ ಎಸ್.ಟಿ. ಸೋಮಶೇಖರ್ ತಿರುಗೇಟು

TV9 Kannada

Leave a comment

Your email address will not be published. Required fields are marked *