ಬೆಂಗಳೂರು: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ಪರಿಸ್ಥಿತಿ ನಿಭಾಯಿಸುವಲ್ಲಿ ಸೋತಿವೆ ಎಂದು ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ.. ಕಾಂಗ್ರೆಸ್ ಪಕ್ಷ ಜನರನ್ನು ಕೋವಿಡ್​ನಿಂದ ರಕ್ಷಿಸಲು ಮುಂದಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್​ಗಳನ್ನು ಮಾಡಿರುವ ಅವರು.. ಚಿಕಿತ್ಸಾ ಕೇಂದ್ರ ಮತ್ತು ಕೊರೊನಾ ಪರೀಕ್ಷೆ ಕೇಂದ್ರಗಳನ್ನು ತೆರೆಯುವುದು ಸೇರಿದಂತೆ ಹಲವು ರೀತಿಯ ಕಾರ್ಯಗಳನ್ನು ಶೀಘ್ರವಾಗಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಸರಣಿ ಟ್ವೀಟ್​ಗಳು..

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಸ್ಥಿತಿ ನಿಭಾಯಿಸಲಾಗದೆ ಕೈಚೆಲ್ಲಿರುವ ಹೊತ್ತಲ್ಲಿ ಕಾಂಗ್ರೆಸ್ ಪಕ್ಷ ಜನರನ್ನು ಕೋವಿಡ್‌ನಿಂದ ರಕ್ಷಿಸಲು ಮುಂದಾಗಿದೆ. ಈ ಕುರಿತು ಇಂದು ಮತ್ತೊಂದು ಸುತ್ತಿನ ಸಭೆಯನ್ನು ಕಾಂಗ್ರೆಸ್ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಜತೆ ನಡೆಸಲಾಯಿತು.

ಕಾಂಗ್ರೆಸ್‌ನ ಹಾಲಿ-ಮಾಜಿ ಶಾಸಕರು, ಸಂಸದರು ಮತ್ತು ಇತರ ನಾಯಕರು ತಮ್ಮ ಕ್ಷೇತ್ರಗಳಲ್ಲಿ ಹಲವು ರೀತಿಯ ಆರೋಗ್ಯ ನೆರವು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ರಾಜ್ಯ ಮತ್ತು‌ ಜಿಲ್ಲಾ ಮಟ್ಟದಲ್ಲಿ‌ ಸಹಾಯವಾಣಿ ಪ್ರಾರಂಭಿಸಲಾಗುವುದು.

ಸೋಂಕಿತರಿಗೆ ನೆರವಾಗಲು ವೈದ್ಯರ ಪಟ್ಟಿ ಸಿದ್ಧಪಡಿಸುತ್ತಿದ್ದೇವೆ. ಚಿಕಿತ್ಸಾ ಕೇಂದ್ರ ಮತ್ತು ಕೊರೊನಾ ಪರೀಕ್ಷೆ ಕೇಂದ್ರಗಳನ್ನು ತೆರೆಯುವುದು ಸೇರಿದಂತೆ ಹಲವು ರೀತಿಯ ಕಾರ್ಯಗಳನ್ನು ಶೀಘ್ರವಾಗಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

The post ಸರ್ಕಾರಕ್ಕೆ ಸೆಡ್ಡು.. ಕೊರೊನಾ ಚಿಕಿತ್ಸೆ, ಟೆಸ್ಟಿಂಗ್​ ಸೆಂಟರ್​ ತೆರೆಯುತ್ತಿದ್ದೇವೆಂದ ಸಿದ್ದರಾಮಯ್ಯ appeared first on News First Kannada.

Source: newsfirstlive.com

Source link