ಹಾವೇರಿ: ವೃದ್ಧೆಯೊಬ್ಬರಿಗೆ ನೆಲದ ಮೇಲೆಯೇ ಮಲಗಿಸಿ ಚಿಕಿತ್ಸೆ ನೀಡಿರುವ ಅಮಾನವೀಯ ಘಟನೆ ರಾಣೇಬೆನ್ನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಮೂಲಗಳ ಪ್ರಕಾರ ಆಸ್ಪತ್ರೆಯಲಿ ಬೆಡ್​ ಇದೆ. ಆದರೆ ಆಕ್ಸಿಜನ್ ಸಂಪರ್ಕ ಇಲ್ಲ. ಇದರಿಂದಾಗಿ ಉಸಿರಾಟದ ಸಮಸ್ಯೆ ಇರುವ ಪೆಸೆಂಟ್​ಗಳು ಪರದಾಡುವಂತಾಗಿದೆ. ತುರ್ತು ಚಿಕಿತ್ಸಾ ವಿಭಾಗದಲ್ಲಿ ಆಕ್ಸಿಜನ್ ನೀಡಲು ವ್ಯವಸ್ಥೆ ಇದೆ. ಅಲ್ಲಿಗೆ ಉಸಿರಾಟದ ಸಮಸ್ಯೆ ಇರುವ ಇತರೆ ರೋಗಿಗಳಿಗೆ ನೀಡಲಾಗುತ್ತಿದೆ.

ಅದರಂತೆ ತುರ್ತು ಚಿಕಿತ್ಸಾ ನೆಲದ ಮೇಲೆ ಆಕ್ಸಿಜನ್ ಮಾಸ್ಕ್ ಹಾಕಿಕೊಂಡು ವೃದ್ಧೆಯರು ನರಳಾಟ ನಡೆಸುತ್ತಿದ್ದಾರೆ. ಇದರಿಂದಾಗಿ ಕೊರೊನಾ ಇಲ್ಲದವರಿಗೂ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿದೆ ಅಂತಾ ರೋಗಿಗಳು ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ. ಈ ಪರಿಸ್ಥಿತಿ ಯಾರಿಗೂ ಬಾರದಿರಲಿ ಅಂತಾ ರೋಗಿಗಳ ಸಂಬಂಧಿಕರು ಇಲ್ಲಿನ ಅವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.

The post ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್​ ಇಲ್ಲದೇ ವೃದ್ಧೆಗೆ ನೆಲದ ಮೇಲೆಯೇ ಚಿಕಿತ್ಸೆ appeared first on News First Kannada.

Source: newsfirstlive.com

Source link