ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ ಸಚಿವ ನಾಗೇಶ್ ಮಹತ್ವದ ಟ್ವೀಟ್ | Minister Nagesh tweet on filling of vacant posts in government pre degree colleges


ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ ಸಚಿವ ನಾಗೇಶ್ ಮಹತ್ವದ ಟ್ವೀಟ್

ಶಿಕ್ಷಣ ಸಚಿವ ಬಿಸಿ ನಾಗೇಶ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 778 ಹುದ್ದೆಗಳ ಭರ್ತಿಗೆ ಸರ್ಕಾರ ಆಗಸ್ಟ್ ತಿಂಗಳಲ್ಲೇ ಅನುಮತಿ ನೀಡಿತ್ತು. ಸದ್ಯ ಈಗ ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ( PU College ) ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ಕೂರಿದ್ದರು.

ಹೀಗಿದೆ ವಿಷಯವಾರು ಉಪನ್ಯಾಸಕರ ಖಾಲಿ ಹುದ್ದೆ ವಿವರ

ಕನ್ನಡ – 100 ಹುದ್ದೆ, ಇಂಗ್ಲೀಷ್ – 120, ಇತಿಹಾಸ – 120, ಅರ್ಥಶಾಸ್ತ್ರ – 180, ಭೂಗೋಳಶಾಸ್ತ್ರ – 20, ವಾಣಿಜ್ಯ ಶಾಸ್ತ್ರ – 80, ಸಮಾಜಶಾಸ್ತ್ರ -75, ರಾಜ್ಯಶಾಸ್ತ್ರ – 75, ಮನಶಾಸ್ತ್ರ -02, ಗಣಕ ವಿಜ್ಞಾನ – 06

ಹೀಗೆ ಒಟ್ಟು 778 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳೋದಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.