ಮೈಸೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಮಾರ್ಟ್‌ಫೋನ್ ವಿತರಣೆ ಮಾಡುವ ಸಂಬಂಧ ಈಗಾಗಲೇ ಸರ್ವೇ ಕಾರ್ಯವನ್ನು ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ನ್ಯೂಸ್‌ಫಸ್ಟ್‌ಗೆ ಮಾಹಿತಿ ನೀಡಿದ್ದಾರೆ.

ಹಳ್ಳಿಗಳ‌ ಬಡ ವಿದ್ಯಾರ್ಥಿಗಳು ಆನ್‌ಲೈನ್ ಶಿಕ್ಷಣದಿಂದ ವಂಚಿತರಾಗಬಾರದು. ಮುಂದಿನ ಶೈಕ್ಷಣಿಕ ವರ್ಷ ಹೇಗಿರುತ್ತೋ ಗೊತ್ತಿಲ್ಲ. ಶಿಕ್ಷಣದಿಂದ ವಂಚಿತ ಮಕ್ಕಳಿಗೆ ಬಾಲ್ಯ ವಿವಾಹ ಆಗಬಾರದು. ಶಿಕ್ಷಣ ವಂಚಿತ ಮಕ್ಕಳು ಬಾಲ ಕಾರ್ಮಿಕರಾಗಬಾರದು. ಇವತ್ತು ಆನ್‌ಲೈನ್ ಶಿಕ್ಷಣಕ್ಕೆ ಸ್ಮಾರ್ಟ್‌ಫೋನ್ ಅಗತ್ಯವಾಗಿದೆ. ಮಕ್ಕಳ ಹಾಜರಾತಿ,‌ ಸ್ಮಾರ್ಟ್‌‌ ಫೋನ್ ಅಗತ್ಯತೆ ಬಗ್ಗೆ ವರದಿ ನೀಡಲು ಎಲ್ಲಾ ಡಿಡಿಪಿಐಗಳಿಗೆ ಸೂಚನೆ ನೀಡಿದ್ದೇನೆ. ಈಗ ಎಂಟು ತಿಂಗಳು, ವರ್ಷಕ್ಕೆ ಒಮ್ಮೆ ಫೋನ್ ಬದಲಾಯಿಸುವುದು ಟ್ರೆಂಡ್ ಆಗಿದೆ. ವಿಧ ಸಂಘ ಸಂಸ್ಥೆಗಳ ನೆರವಿನೊಂದಿಗೆ ಸ್ಮಾರ್ಟ್‌ ಫೋನ್ ಬ್ಯಾಂಕ್‌ ಮಾಡಬಹುದಾ ಎಂಬುದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಎಸ್.ಸುರೇಶ್‌ಕುಮಾರ್ ಅವರು ವಿವರಿಸಿದರು.

ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪರೀಕ್ಷೆ ನಡೆಯುತ್ತಾ..?
ಎಸ್‌.ಎಸ್‌.ಎಲ್‌.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಪರ ವಿರೋಧ ಚರ್ಚೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕಳೆದ ಭಾರಿಯೂ ಪರ ವಿರೋಧ ಚರ್ಚೆ ಕೇಳಿ ಬಂದಿತ್ತು. ಶೇ.98 ರಷ್ಟು ಮಕ್ಕಳು ಪರೀಕ್ಷೆಗೆ ಹಾಜರಾಗಿದ್ರು. ಇಡೀ ದೇಶವೇ ನೋಡುವಂತೆ ಪರೀಕ್ಷೆ ನಡೆಸಿದ್ದೇವು. ಈ ಬಾರಿಯೂ ಪರೀಕ್ಷೆ ನಡೆಸುವ ಸಂಬಂಧ ಮಾಜಿ ಶಿಕ್ಷಣ ಸಚಿವರು, ಪರಿಷತ್ ಸದಸ್ಯರು, ಶಿಕ್ಷಣ ತಜ್ಞರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಚಾಮರಾಜನಗರ ಆಕ್ಸಿಜನ್ ದುರಂತ ಬಗ್ಗೆ ಈಗಾಗಲೇ ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ಸರ್ಕಾರದ ನಿಲುವನ್ನ ಹೇಳಿದ್ದಾರೆ. ಪ್ರಕರಣ‌ ವಿಚಾರಣೆಯಲ್ಲಿರುವುದರಿಂದ ಪ್ರತಿಕ್ರಿಯಿಸಲ್ಲ. ಜಿಲ್ಲಾಧಿಕಾರಿಗಳ ವೈಫಲ್ಯದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತೆ ಎಂದರು.

The post ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್​​ನ್ಯೂಸ್​ ನೀಡಿದ ಸುರೇಶ್​ ಕುಮಾರ್​  appeared first on News First Kannada.

Source: newsfirstlive.com

Source link