ಪ್ರಧಾನಿ ನರೇಂದ್ರ ಮೋದಿ
ಪಂಜಾಬ್ನಲ್ಲಿ ಫೆ.20ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಪಠಾಣ್ಕೋಟ್ನಲ್ಲಿ ಚುನಾವಣಾ ರ್ಯಾಲಿ (Election Rally)ನಡೆಸಿದರು. ಇಂದು ಗುರು ರವಿದಾಸ್ ಜೀ ಜಯಂತಿ ನಿಮಿತ್ತ ದೆಹಲಿಯ ಕರೋಲ್ ಬಾಗ್ನಲ್ಲಿರುವ ಗುರು ರವಿದಾಸ್ ವಿಶ್ರಾಮ್ ಧಾಮ್ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಬಳಿಕ ಪಂಜಾಬ್ಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದರು. ಇದೇ ವೇಳೆ ಪ್ರತಿಪಕ್ಷ, ಪಂಜಾಬ್ನಲ್ಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಅದು ಕರ್ತಾರ್ಪುರ ಸಾಹೀಬ್ನ್ನು ಭಾರತದ ಭೂಪ್ರದೇಶದಲ್ಲಿಯೇ ಉಳಿಸಿಕೊಳ್ಳಲು ವಿಫಲವಾಯಿತು ಎಂದು ಹೇಳಿದರು.