ಸರ್​​ ಗಂಗಾರಾಮ್​​ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್​​​, ಜೂನ್​​ 23ಕ್ಕೆ ಇಡಿ ವಿಚಾರಣೆ | Congress president Sonia Gandhi discharged from Sir Ganga Ram Hospital


ಸರ್​​ ಗಂಗಾರಾಮ್​​ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್​​​, ಜೂನ್​​ 23ಕ್ಕೆ ಇಡಿ ವಿಚಾರಣೆ

ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ವ್ಯವಹಾರಗಳ ಕುರಿತು ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಜೂನ್ 23 ರಂದು ಸೋನಿಯಾ ಅವರನ್ನು ವಿಚಾರಣೆಗೆ ಒಳಪಡಿಸಲಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಕೊವಿಡ್ -19 (Covid-19) ಸೋಂಕಿನ ನಂತರ ಕೆಳ ಶ್ವಾಸೇಂದ್ರಿಯದಲ್ಲಿ ಶಿಲೀಂಧ್ರಗಳ ಸೋಂಕಿನಿಂದ ಚಿಕಿತ್ಸೆ ಪಡೆದ ನಂತರ ಸೋಮವಾರ ಸಂಜೆ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಪಕ್ಷದ ಸಂಸದ ಜೈರಾಮ್ ರಮೇಶ್( Jairam Ramesh) ತಿಳಿಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ವ್ಯವಹಾರಗಳ ಕುರಿತು ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಜೂನ್ 23 ರಂದು ಸೋನಿಯಾ ಅವರನ್ನು ವಿಚಾರಣೆಗೆ ಒಳಪಡಿಸಲಿದೆ. ಸೋನಿಯಾ ಗಾಂಧಿ ಅವರನ್ನು ಜೂನ್ 12 ರಂದು ಆಸ್ಪತ್ರೆಯ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು, ಸೋಂಕನ್ನು ಪತ್ತೆಹಚ್ಚಿದಾಗ ಮೂಗಿನಿಂದ ಅಪಾರ ರಕ್ತಸ್ರಾವವಾಗಿತ್ತು. ಹದಿನೈದು ದಿನಗಳ ಹಿಂದೆ ಸೋನಿಯಾ ಗಾಂಧಿ ಅವರಿಗೆ ಕೊವಿಡ್-19 ಇರುವುದು ಪತ್ತೆಯಾಗಿತ್ತು. ಆ ಸಮಯದಲ್ಲಿ ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಅವರು, ಸೋನಿಯಾಗಾಂಧಿಗೆ ಸೌಮ್ಯವಾದ ಜ್ವರ ಮತ್ತು ಇತರ ಕೆಲವು ರೋಗಲಕ್ಷಣಗಳನ್ನು ಕಾಣಿಸಿಕೊಂಡಿದ್ದು ಅವರು ಐಸೋಲೇಟ್ ಆಗಿದ್ದಾರೆ ಎಂದು ಹೇಳಿದ್ದಾರೆ.

ಸೋನಿಯಾ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ರಾಜಕಾರಣಿಯ ಮೆಡಿಕಲ್ ಪ್ಯಾರಾಮೀಟರ್ ಸ್ಥಿರವಾಗಿವೆ ಎಂದು ಹೇಳಿದರು. ಮೂಗಿನ ರಕ್ತಸ್ರಾವಕ್ಕೆ ಚಿಕಿತ್ಸೆ ಪಡೆದ ನಂತರ, ಅವಳನ್ನು ಅಬ್ಸುರ್ವೇಷನ್ ಗಾಗಿ ಆಸ್ಪತ್ರೆಯ ಹಳೆಯ ಬ್ಲಾಕ್‌ನಲ್ಲಿರುವ ಪ್ರೈವೇಟ್ ರೂಂಗೆ ಸ್ಥಳಾಂತರಿಸಲಾಗಿತ್ತು.

ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಪಕ್ಷದ ಪ್ರಚಾರದಲ್ಲಿ ಹಣಕಾಸು ಅಕ್ರಮಗಳ ಕುರಿತು ಇಡಿ ತನಿಖೆಗೆ ಈ ಪ್ರಕರಣವು ಸಂಬಂಧಿಸಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸಿದೆ. ಇಡಿ ಇತ್ತೀಚೆಗೆ ಕಾಂಗ್ರೆಸ್‌ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಕೂಡ ಈ ಪ್ರಕರಣದಲ್ಲಿ ಪ್ರಶ್ನಿಸಿತ್ತು.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರೆ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಸೇರಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಶುರು ಮಾಡಿದ್ದರು. ದೇಶದ ಸ್ವಾತಂತ್ರ್ಯ ಚಳುವಳಿಗೆ ಬೆನ್ನೆಲುಬಾಗಿ ನಿಲ್ಲುವುದು ಈ ಪತ್ರಿಕೆಯ ಪ್ರಮುಖ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಟಿಸಿರುವ ಈ ಪತ್ರಿಕೆ ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿ ಬದಲಾಗಿತ್ತು. ಕಾಂಗ್ರೆಸ್ ಪಕ್ಷದ ನಿಲುವು, ಅಭಿಪ್ರಾಯಗಳನ್ನು ಇದರಲ್ಲಿ ಪ್ರಕಟ ಮಾಡಲಾಗುತ್ತಿತ್ತು. 1938ರ ಸೆಪ್ಟೆಂಬರ್ 9ರಂದು ಲಕ್ನೋದಲ್ಲಿ ಇಂಗ್ಲೀಷ್ ಭಾಷೆಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಟಣೆ ಆರಂಭವಾಗಿತ್ತು. ಬಳಿಕ ಹಿಂದಿ ಭಾಷೆಯ ನವಜೀವನ್ ಮತ್ತು ಉರ್ದು ಭಾಷೆಯ ಕ್ವಾಮಿ ಆವಾಜ್ ಪತ್ರಿಕೆಯನ್ನೂ ಆರಂಭ ಮಾಡಿತ್ತು. ಈ ಮೂರೂ ಪತ್ರಿಕೆಗಳ ಒಡೆತನ ಎಜಿಎಲ್ ಹೆಸರಿನಲ್ಲಿತ್ತು.

ನೆಹರು ಅವರು ಕಟ್ಟಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಕಂಪನಿಯು ಯಾವುದೇ ಒಬ್ಬ ವ್ಯಕ್ತಿಗೆ ಸೇರುವುದಿಲ್ಲ. 2010ರ ವೇಳೆಗ ಎಜಿಎಲ್ 1057 ಷೇರುದಾರರನ್ನು ಹೊಂದಿತ್ತು, ಆದರೆ, ತೀವ್ರ ನಷ್ಟದಲ್ಲಿದ್ದ ಈ ಕಂಪನಿಯ ಷೇರುಗಳನ್ನು 2011ರಲ್ಲಿ ಯಂಗ್ ಇಂಡಿಯಾ ಸಂಸ್ಥೆಗೆ ವರ್ಗಾವಣೆ ಮಾಡಲಾಗಿತ್ತು. ನೆಹರು ಪ್ರಧಾನಿಯಾಗಿದ್ದಾಗ ಎಜಿಎಲ್ ಗೆ ಭಾರೀ ಪ್ರಮಾಣದಲ್ಲಿ ದೇಣಿಗೆ ಹರಿದುಬರುತ್ತಿತ್ತು. ಪ್ರಧಾನಿಯ ಅಧಿಕಾರ ಬಳಸಿಕೊಂಡು ದೇಶದ ವಿವಿದೆಡೆ ಭೂಮಿಯನ್ನೂ ಮಂಜೂರು ಮಾಡಿದ್ದರು. ಎಜಿಎಲ್ ಆರ್ಥಿಕ ಸಂಕಷ್ಟದಲ್ಲಿದ್ದರೂ, ಈ ಕಂಪನಿ ಹೊಂದಿದ್ದ ಆಸ್ತಿಯ ಮೌಲ್ಯ ಅಂದಾಜು 2 ರಿಂದ 5 ಸಾವಿರ ಕೋಟಿ ಎಂದು ಹೇಳಲಾಗಿದೆ. 2007ರ ಏಪ್ರಿಲ್ 1 ರಂದು ತಾತ್ಕಾಲಿಕವಾಗಿ ಈ ಪತ್ರಿಕೆಯ ಪ್ರಕಟಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ವಿಫಲ, ಜಾಹೀರಾತು ಆದಾಯದ ಕೊರತೆಯಿಂದಾಗಿ 2008ರಲ್ಲಿ ಎಜಿಎಲ್ ಅನ್ನು ಮುಚ್ಚಲಾಗಿತ್ತು. ಬಳಿಕ 2016ರ ಜನವರಿ 21 ರಿಂದ ಮತ್ತೊಮ್ಮೆ ಮುದ್ರಣ ಆರಂಭಿಸಲಾಗಿತ್ತು

TV9 Kannada


Leave a Reply

Your email address will not be published.