ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಹಗರಣ ಪ್ರಕರಣ; ಸಿಸಿಬಿಗೆ ಮಹತ್ವದ ಸುಳಿವು ಲಭ್ಯ | CCB has received significant clues about the scandal in the appointment of assistant professors


ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಹಗರಣ ಪ್ರಕರಣ; ಸಿಸಿಬಿಗೆ ಮಹತ್ವದ ಸುಳಿವು ಲಭ್ಯ

ಸಿಸಿಬಿ ವಿಭಾಗ

ಸಿಸಿಬಿ ಅಧಿಕಾರಿಗಳು ಹಂತ ಹಂತವಾಗಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಮತ್ತಷ್ಟು ಆರೋಪಿಗಳು ಬಂಧನವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸದ್ಯ ಮೊಬೈಲ್ ರಿಟ್ರೀವ್ ಮಾಡಿ ಡಿಟೇಲ್ಸ್ ಟ್ಯಾಲಿ ಮಾಡಲಾಗುತ್ತಿದೆ.

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಗೆ (CCB Police) ಮಹತ್ವದ ಸುಳಿವು ಲಭ್ಯವಾಗಿದೆ. ತನಿಖೆ ವೇಳೆ ಸಿಸಿಬಿ ತಂಡ ಮತ್ತೆರಡು ವಿಷಯಗಳ ಪ್ರಶ್ನೆ ಪತ್ರಿಕೆ (Question Paper) ಸೋರಿಕೆಯಾಗಿರುವ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದ ಇಬ್ಬರು ಆರೋಪಿಗಳು ತನಿಖಾಧಿಕಾರಿಗಳ ಮುಂದೆ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಪೊಲೀಸ್ ಕಮಿಷನರ್ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಈ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಸಿಸಿಬಿ ಅಧಿಕಾರಿಗಳು ಹಂತ ಹಂತವಾಗಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಮತ್ತಷ್ಟು ಆರೋಪಿಗಳು ಬಂಧನವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸದ್ಯ ಮೊಬೈಲ್ ರಿಟ್ರೀವ್ ಮಾಡಿ ಡಿಟೇಲ್ಸ್ ಟ್ಯಾಲಿ ಮಾಡಲಾಗುತ್ತಿದೆ. ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಿಸಿಬಿ ಪತ್ರ ಬರೆದಿದೆ. ಕೆಇಎಯಿಂದ ಉತ್ತರ ಬಾರದ ಹಿನ್ನೆಲೆ ನೋಟಿಸ್ ನೀಡುವ ಸಾಧ್ಯತೆಯೂ ಇದೆ.

ಕೆಲ ಶಂಕಿತ ಅಭ್ಯರ್ಥಿಗಳ OMR ಶೀಟ್​ಗಳನ್ನ ನೀಡುವಂತೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಒಎಂಆರ್ ಶೀಟ್ಗಳನ್ನು ಪಡೆದು ಸಿಸಿಬಿ ಅಧಿಕಾರಿಗಳು ತಾಳೆ ಹಾಕಲಿದ್ದಾರೆ.

TV9 Kannada


Leave a Reply

Your email address will not be published. Required fields are marked *