ಸಿಇಟಿ ಪರೀಕ್ಷೆಯಲ್ಲಿ ಮೊಬೈಲ್ ಮೂಲಕ ಉತ್ತರ ಬರೆಯಲು ಯತ್ನ! ವಿದ್ಯಾರ್ಥಿ ಪೊಲೀಸರ ವಶಕ್ಕೆ | In CET chemistry exam student attempt to write an answer via mobile in Chikkamagaluru


ಸಿಇಟಿ ಪರೀಕ್ಷೆಯಲ್ಲಿ ಮೊಬೈಲ್ ಮೂಲಕ ಉತ್ತರ ಬರೆಯಲು ಯತ್ನ! ವಿದ್ಯಾರ್ಥಿ ಪೊಲೀಸರ ವಶಕ್ಕೆ

ಸಂಗ್ರಹ ಚಿತ್ರ

ಚಿಕ್ಕಮಗಳೂರು ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇಂದು (ಜೂನ್​​ 18) ರಂದು ನಡೆಯುತ್ತಿದ್ದ ರಸಾಯನ ವಿಜ್ಞಾನ ವಿಷಯದ ಸಿಇಟಿ ಪರೀಕ್ಷೆಯಲ್ಲಿ ಮೊಬೈಲ್ ಮೂಲಕ ಉತ್ತರ ಬರೆಯಲು ಯತ್ನಿಸಿದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು (ಜೂನ್​​ 18) ನಡೆಯುತ್ತಿದ್ದ ರಸಾಯನ ವಿಜ್ಞಾನ (Chemistry) ವಿಷಯದ ಸಿಇಟಿ (CET) ಪರೀಕ್ಷೆಯಲ್ಲಿ ಮೊಬೈಲ್ ಮೂಲಕ ಉತ್ತರ ಬರೆಯಲು ಯತ್ನಿಸಿದ ವಿದ್ಯಾರ್ಥಿಯನ್ನು (Student) ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿ ಮೈಸೂರು ಮೂಲದವನಾಗಿದ್ದು, ಮೊಬೈಲ್‌ ಫೋನ್‌ ಮೂಲಕ ಗೂಗಲ್‌ನಲ್ಲಿ ಉತ್ತರ ಹುಡುಕಲು ಯತ್ನಸಿದ್ದಾನೆ. ಈ ವೇಳೆ ಕೊಠಡಿ ಮೇಲ್ವಿಚಾರಕರು ಪರಿಶೀಲಿಸಿದಾಗ ಮೊಬೈಲ್‌ ಪತ್ತೆಯಾಗಿದೆ.

ರಾಜ್ಯದಲ್ಲಿ ಮೂರು ದಿನಗಳ ಕಾಲ ನಡೆದ ಸಿಇಟಿ ಪರೀಕ್ಷೆ

ರಾಜ್ಯದಲ್ಲಿ ಜೂನ್ 16, 17 ಮತ್ತು 18ರಂದು ಸಿಇಟಿ ಪರೀಕ್ಷೆ ನಡೆದಿವೆ. ಈ ಪರೀಕ್ಷೆಯನ್ನು ನೀಟ್ ಮಾದರಿಯಲ್ಲಿ  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ವಹಿಸಿದೆ. ಈ ಬಾರಿ 2.11 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಜೂನ್ 16ರಂದು ಜೀವಶಾಸ್ತ್ರ ಹಾಗೂ ಗಣಿತ ಪರೀಕ್ಷೆ , ಜೂನ್ 17ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಜೂನ್ 18ರಂದು ಹೊರನಾಡ ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆದಿವೆ.

ಇದನ್ನು ಓದಿ: Karnataka 2nd PUC Result 2022: ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಫಲಿತಾಂಶದ ಬಗ್ಗೆ ಹೇಳಿದ್ದೇನು?

ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಿ ಸಿಇಟಿ ಪರೀಕ್ಷೆಗೆ ಬರುವಂತಿಲ್ಲ ಎಂದು ಪ್ರಾಧಿಕಾರವು ಸ್ಪಷ್ಟಪಡಿಸಿತ್ತು. ಈ ಬಾರಿ 2.11 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 1.4 ಲಕ್ಷ ಪುರುಷ ವಿದ್ಯಾರ್ಥಿಗಳು, 1.7 ಲಕ್ಷ ಮಹಿಳಾ ವಿದ್ಯಾರ್ಥಿಗಳು. ಪರೀಕ್ಷಾ ಕೇಂದ್ರಗಳ ಬಳಿ ಜಾಮರ್, ಮೆಟಲ್ ಡಿಟೆಕ್ಟರ್​ಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿಯಾಗಿತ್ತು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್ ಅಂಗಡಿಗಳಿಗೆ ಬೀಗ ಹಾಕಬೇಕು ಎಂದು ಸೂಚಿಸಲಾಗಿತ್ತು.

ಇದನ್ನು ಓದಿ: Career Guidance: ದ್ವಿತೀಯ ಪಿಯುಸಿ ನಂತರ BSC ಫಾರ್ಮಸಿ, BSC ನರ್ಸಿಂಗ್ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

486 ಕೇಂದ್ರಗಳು:

ಸಿಇಟಿ ಪರೀಕ್ಷೆ ಕುರಿತು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಿದ್ದರು. ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಗಡಿ ಭಾಗದ 6 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿಯೂ ಅದೇ ರೀತಿ ಪರೀಕ್ಷೆ ನಡೆದಿದೆ. 486 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಈ ಪೈಕಿ ಬೆಂಗಳೂರಿನಲ್ಲಿ 87, ಇತರ ಜಿಲ್ಲೆಗಳಲ್ಲಿ 399 ಕೇಂದ್ರಗಳು ಇದ್ದವು. ಕಳೆದ ವರ್ಷಕ್ಕಿಂದ ಈ ಬಾರಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಒಟ್ಟು 486 ವೀಕ್ಷಕರು, 972 ವಿಶೇಷ ಜಾಗೃತ ದಳದ ಸದಸ್ಯರು, 486 ಪ್ರಶ್ನೆಪತ್ರಿಕೆ ಪಾಲಕರು, ಸುಮಾರು 9600 ಕೊಠಡಿ ಮೇಲ್ವಿಚಾರಕರು ಸೇರಿದಂತೆ ಒಟ್ಟು 20,483 ಸಿಬ್ಬಂದಿಯನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ಬಾರಿ ಒಟ್ಟು 2,16,525 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು ಎಂದು ಹೇಳಿದ್ದರು.

TV9 Kannada


Leave a Reply

Your email address will not be published.