ಬೆಂಗಳೂರು: ಕೊರೊನಾ 2ನೇ ಅಲೆಯ ಅಬ್ಬರಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಅರೆಷ್ಟೋ ಜನ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ನರಳಾಡಿ ಪ್ರಾಣ ತೆರುತ್ತಿದ್ದಾರೆ. ಕೊರೊನಾ ಪರಿಹಾರ ನಿಧಿಗಾಗಿ ಅದೆಷ್ಟೋ ಜನ ಪಿಎಂ ಕೇರ್ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಫಂಡ್ ನೀಡುತ್ತಿದ್ದಾರೆ. ನಟಿ ತಾರಾ 25 ಲಕ್ಷ ರೂಪಾಯಿ ಚೆಕ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕೈಗೆ ಹಸ್ತಾಂತರಿಸಿದ್ದಾರೆ.

ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿದೆ. ನಟಿ ತಾರಾ ಅನುರಾಧ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದು, ಈ ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ಇಂದು ಹಸ್ತಾಂತರಿಸಿದ್ದಾರೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪುನೀತ್ ಪಾಠಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೋವಿಡ್ ನಿರ್ವಹಣೆಗೆ 25 ಲಕ್ಷ ದೇಣಿಗೆ ನೀಡಲಾಗಿದೆ. ಇಂತಹ ಸಮಯದಲ್ಲಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ನಮ್ಮ ನಿಗಮದಿಂದಲೂ ಸಾಧ್ಯವಾದಷ್ಟು ಸಹಕಾರ ಕೋವಿಡ್ ನಿಯಂತ್ರಣಕ್ಕೆ ನೀಡಿದ್ದೇವೆ ಎಂದು ನಟಿ ತಾರಾ ಹೇಳಿದ್ದಾರೆ. ನೆಲೆಬ್ರಿಟಿಗಳು ತಮ್ಮ ಕೈಲಾದಷ್ಟು ಸಹಾಯ ಮತ್ತು ಕೊರೊನ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ

The post ಸಿಎಂ ಪರಿಹಾರ ನಿಧಿಗೆ ಅರಣ್ಯ ಅಭಿವೃದ್ಧಿ ನಿಗಮದಿಂದ 25 ಲಕ್ಷ ರೂ, ಚೆಕ್ ಹಸ್ತಾಂತರಿಸಿದ ನಟಿ ತಾರಾ appeared first on Public TV.

Source: publictv.in

Source link