ಸಿಎಂ ಬಸವರಾಜ ಬೊಮ್ಮಾಯಿ ಅಕ್ಟೋಬರ್ 11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ | Chief minister basavaraj bommai to visit tirupati on oct 11

ಸಿಎಂ ಬಸವರಾಜ ಬೊಮ್ಮಾಯಿ ಅಕ್ಟೋಬರ್ 11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ

ಸಿಎಂ ಬಸವರಾಜ ಬೊಮ್ಮಾಯಿ ಅಕ್ಟೋಬರ್ 11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ

ದೆಹಲಿ: ಸದ್ಯ ಎಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಿಂದ ಇಂದು ಮಧ್ಯಾಹ್ನ ವಾಪಸಾಗಲಿದ್ದಾರೆ. ಈ ಮೊದಲು ಬೆಳಗ್ಗೆ 8ಕ್ಕೆ ದೆಹಲಿಯಿಂದ ಹೊರಡಬೇಕಿದ್ದ ಸಿಎಂ ಬೊಮ್ಮಾಯಿ ದೆಹಲಿಯಲ್ಲಿಂದು ಕೇಂದ್ರ ಸಚಿವರಾದ ಪಿಯೂಶ್ ಗೋಯಲ್. ಜ್ಯೋತಿರಾದಿತ್ಯ ಸಿಂಧಿಯಾ ಅವರುಗಳನ್ನು ಭೇಟಿ ಮಾಡಲಿದ್ದಾರೆ. ಈ ಮಧ್ಯೆ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೆ ಸಮಯ ಕೇಳಿದ್ದಾರೆ.

ಇನ್ನು ದೆಹಲಿಯಿಂದ ವಾಪಸಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅಕ್ಟೋಬರ್ 11ರಂದು ಮಧ್ಯಾಹ್ನ ತಿರುಪತಿಗೆ ತೆರಳಲಿದ್ದಾರೆ. ಕೆಲ ಸಚಿವರು ಸಹ ಸಿಎಂ ಬೊಮ್ಮಾಯಿ ಜೊತೆ ತಿರುಪತಿಗೆ ತೆರಳಲಿದ್ದಾರೆ. ಅಕ್ಟೋಬರ್ 11ರಂದು ರಾತ್ರಿ ತಿರುಪತಿಯಲ್ಲಿ ಸಿಎಂ ವಾಸ್ತವ್ಯ ಹೂಡಲಿದ್ದು, ಅ.12ರಂದು ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ. ತಿರುಮಲದಲ್ಲಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸಿಎಂ ಆದ ನಂತರ ಬಸವರಾಜ ಬೊಮ್ಮಾಯಿ ಮೊದಲ ಬಾರಿಗೆ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ. ಅ. 12ರಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ.

TV9 Kannada

Leave a comment

Your email address will not be published. Required fields are marked *