
ಸಿಎಂ ಬೊಮ್ಮಾಯಿ ಇಂದು ಕೂಡ ಸಿಟಿ ರೌಂಡ್ಸ್
ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೂಡ ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಟಿ ರೌಂಡ್ಸ್ ಹಾಕಲಿದ್ದಾರೆ. ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ, ಪೈ ಬಡಾವಣೆಗಳಲ್ಲಿ ವೀಕ್ಷಣೆ ಮಾಡಲಿದ್ದಾರೆ.
ಬೆಂಗಳೂರು: ಕಳೆದೆರೆಡು ದಿನಗಳಿಂದ ಮಳೆಹಾನಿ (Karnataka Rains) ಪ್ರದೇಶಗಳಿಗೆ ಭೇಟಿಕೊಟ್ಟು ಪರೀಶೀಲನೆ ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೂಡ ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಟಿ ರೌಂಡ್ಸ್ ಹಾಕಲಿದ್ದಾರೆ. ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ, ಪೈ ಬಡಾವಣೆಗಳಲ್ಲಿ ವೀಕ್ಷಣೆ ಮಾಡಲಿದ್ದಾರೆ. ಬೆಳಗ್ಗೆ 8 ಗಂಟೆಯಿಂದ 9 ಗಂಟೆಯವರೆಗೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಳೆ ಹಾನಿ ಸಂಬಂಧ ಸ್ಥಳೀಯರಿಂದ ಸಿಎಂ ಮಾಹಿತಿ ಪಡೆಯಲಿದ್ದಾರೆ. ನಿನ್ನೆ ಕೂಡ ಸಿಎಂ ಬೊಮ್ಮಾಯಿ ನಗರ ಪ್ರದಕ್ಷಿಣೆ ಮಾಡಿದ್ದು, ಜೆ.ಸಿ.ನಗರ, ಕಮಲಾ ನಗರ, ನಾಗವಾರ ಮೆಟ್ರೋ ನಿಲ್ದಾಣ, ಹೆಚ್ಬಿಆರ್ ಲೇಔಟ್, ಹೆಬ್ಬಾಳದ ಎಸ್ಟಿಪಿ ಹೀಗೆ ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳಿಂದ ಮಾಹಿತಿ ಪಡೆದುಕೊಂಡರು.