ಸಿಎಂ ಬೊಮ್ಮಾಯಿ ‘ದೆಹಲಿ ಯಾತ್ರೆ’.. ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಆಸೆ

ಬೆಂಗಳೂರು: ಇವತ್ತು ಸಿಎಂ ಬಸವರಾಜ್‌ ಬೊಮ್ಮಾಯಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿ, ಕೇಂದ್ರದ ಸಚಿವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಿದ್ದಾರೆ.

ಜೊತೆಗೆ ಹೈಕಮಾಂಡ್‌ ನಾಯಕರ ಬಳಿ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲಿದ್ದಾರೆ. ಅಲ್ಲದೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇವರೆಲ್ಲರ ಭೇಟಿ ಮುಗಿದ ನಂತರ ಸಂಜೆಯೇ ಸಿಲಿಕಾನ್‌ ಸಿಟಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಹೈಕಮಾಂಡ್ ನಾಯಕರ ಜೊತೆ ಮಾತನಾಡುವ ವೇಳೆ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿರುವವರ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಸಚಿವಾಕಾಂಕ್ಷಿಗಳಲ್ಲೂ ಸಿಎಂ ದೆಹಲಿ ಪ್ರವಾಸ ಹೊಸ ಆಸೆಯನ್ನ  ಮೂಡಿಸಿದೆ. ಇನ್ನು ಈಗಾಗಲೇ ಮಾಜಿ ಸಚಿವ ಸಿಪಿ ಯೋಗೇಶ್ವರ್​ ಬೊಮ್ಮಾಯಿ ಅವರನ್ನ ಭೇಟಿ ಮಾತುಕತೆ ನಡೆಸಿದ್ದಾರೆ.

News First Live Kannada

Leave a comment

Your email address will not be published. Required fields are marked *