ಸಿಎಂ ಬೊಮ್ಮಾಯಿ ಮತ್ತೊಮ್ಮೆ ಸಿಟಿ ರೌಂಡ್ಸ್; ಗುಂಡಿಮಯವಾಗಿರುವ ಹೆಣ್ಣೂರು ರಸ್ತೆಯಲ್ಲಿ ಹೋಗಲು ಸಿಎಂ ಹೈರಾಣ, ರಾಜಕಾಲುವೆ ಪರಿಶೀಲನೆ | CM Basavaraj bommai city rounds and visits shirdi sai baba layout


ಸಿಎಂ ಬೊಮ್ಮಾಯಿ ಮತ್ತೊಮ್ಮೆ ಸಿಟಿ ರೌಂಡ್ಸ್; ಗುಂಡಿಮಯವಾಗಿರುವ ಹೆಣ್ಣೂರು ರಸ್ತೆಯಲ್ಲಿ ಹೋಗಲು ಸಿಎಂ ಹೈರಾಣ, ರಾಜಕಾಲುವೆ ಪರಿಶೀಲನೆ

ಬಸವರಾಜ್ ಬೊಮ್ಮಾಯಿ (ಸಂಗ್ರಹ ಚಿತ್ರ)

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಸಿಟಿ ರೌಂಡ್ಸ್ ಕೈಗೊಂಡಿದ್ದಾರೆ. ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಕೆ.ಆರ್.ಪುರಂನತ್ತ ಬೊಮ್ಮಾಯಿ ತೆರಳಿದ್ದು ಗುಂಡಿಮಯವಾಗಿರುವ ಹೆಣ್ಣೂರು ರಸ್ತೆಯಲ್ಲಿ ಹೋಗಲು ಸಿಎಂ ಹೈರಾಣಾಗಿದ್ದಾರೆ.

ಸಿಎಂ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ಕೈಗೊಂಡಿದ್ದಾರೆ. ಗುಂಡಿಮಯವಾಗಿರುವ ಹೆಣ್ಣೂರು ರಸ್ತೆಯಲ್ಲಿ ಸಂಚರಿಸುವಾಗ ಸಿಎಂ ಹೈರಾಣಾದ್ರು. ಸದ್ಯ ಹೆಣ್ಣೂರು ಬಂಡೆಯ ವಡ್ಡರಪಾಳ್ಯಕ್ಕೆ ಹಾದುಹೋಗುವ ರಾಜಕಾಲುವೆ, ಶಿರಡಿ ಸಾಯಿಬಾಬಾ ಲೇಔಟ್ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಿಎಂಗೆ ಸ್ಥಳೀಯ ಶಾಸಕ ಬೈರತಿ ಬಸವರಾಜ ಸಾಥ್ ಕೊಟ್ಟಿದ್ದಾರೆ. ಮೊದಲಿಗೆ ಸಿಎಂ ಬೊಮ್ಮಾಯಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ರು. ಬಳಿಕ ರಾಜಕಾಲುವೆಯ ಮ್ಯಾಪ್ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ್ರು. ನಗರದಲ್ಲಿ ಸುರಿದ ಮಳೆಯಿಂದಾಗಿ ರಾಜಕಾಲುವೆ ತುಂಬಿ ಪಕ್ಕದ ಲೇಔಟ್ಗಳಿಗೆ ನೀರು ನುಗ್ಗಿ ಸಾಕಷ್ಟು ಅನಾಹುತಗಳಾಗಿತ್ತು.

ಇನ್ನು ಮತ್ತೊಂದೆಡೆ ಅಕಾಲಿಕ ಮಳೆಯಿಂದ ಬೆಳೆ ಮತ್ತು ಆಸ್ತಿ ಹಾನಿಗೆ ಪರಿಹಾರ ನೀಡಲು ಶೀಘ್ರ ಕ್ರಮ ಕೈಗೊಳ್ಳುವ ವಿಚಾರಕ್ಕೆ ಸಂಬಂಧಿಸಿ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಇಂದು ಕಂದಾಯ ಸಚಿವ ಆರ್. ಅಶೋಕ್ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕು ಅಧಿಕಾರಿಗಳು, ಮಧ್ಯಾಹ್ನ 3 ಗಂಟೆಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಅಧಿಕಾರಿಗಳು ಮತ್ತು ಸಂಜೆ 4 ಗಂಟೆಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕು ಅಧಿಕಾರಿಗಳ ಜೊತೆ ಆರ್. ಅಶೋಕ್ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: ರಾಜಕೀಯಕ್ಕಾಗಿ ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆರೋಪ

TV9 Kannada


Leave a Reply

Your email address will not be published. Required fields are marked *