ಶಿವಮೊಗ್ಗ: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ದ ಎಂಬ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಮಾಧ್ಯಮದವರು ಹೇಳಿದ ನಂತರವಷ್ಟೇ ನನಗೆ ತಿಳಿಯಿತು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಕುರಿತು ನನಗೆ ಹೆಚ್ಚಿನ ಮಾಹಿತಿ ಇಲ್ಲ. ಹೀಗಾಗಿ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದಿದ್ದಾರೆ. ದೆಹಲಿಗೆ ಹೋಗುವವರು, ಬರುವವರ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಯವರು ಸಹ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ವಿಚಾರದ ಕುರಿತು ಸಚಿವರು, ಶಾಸಕರು ಯಾರು ಸಹ ಅನವಶ್ಯಕವಾಗಿ ಮಾತನಾಡಬೇಡಿ ಎಂದು ಸೂಚಿಸಿವುದಾಗಿ ತಿಳಿಸಿದ್ದಾರೆ. ಇದನ್ನು ಓದಿ:ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ

ನಮ್ಮ ಸರ್ವ ಸಮ್ಮತ ನಾಯಕನಾಗಿ ಯಡಿಯೂರಪ್ಪ ಅವರು ಆಯ್ಕೆ ಆಗಿದ್ದಾರೆ. ಸಿಎಂ ಯಾವ ಅರ್ಥದಲ್ಲಿ ಹೇಳಿದ್ದರೋ ನನಗೆ ಗೂತ್ತಿಲ್ಲ. ಈ ವಿಚಾರ ತಿಳಿದು ಮಾತನಾಡುತ್ತೇನೆ ಎಂದು ಹೇಳುವ ಮೂಲಕ ಸಚಿವ ಬಿ.ಸಿ.ಪಾಟೀಲ್ ಜಾಣ ಉತ್ತರ ನೀಡಿದರು.

The post ಸಿಎಂ ರಾಜೀನಾಮೆ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ: ಬಿ.ಸಿ.ಪಾಟೀಲ್ appeared first on Public TV.

Source: publictv.in

Source link