ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಇದೀಗ ಅಧಿಕೃತವಾಗಿದ್ದು, ಜುಲೈ 26ರಂದು ರಾಜ್ಯಪಾಲರನ್ನು ಸಿಎಂ ಯಡಿಯೂರಪ್ಪ ಭೇಟಿ ಆಗಲಿದ್ದು, ಅಂದೇ ಬಿ.ಎಸ್ ಯಡಿಯೂರಪ್ಪ ಅವರು ತಾಂತ್ರಿಕವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬೆನ್ನಲ್ಲೇ ಇದೀಗ ಸಿಎಂ ರೇಸ್‍ನ ಅಂತಿಮ ಸ್ಪರ್ಧೆಯಲ್ಲಿ ಇಬ್ಬರು ನಾಯಕರ ಹೆಸರು ಫೈನಲ್ ಆಗಿದೆ ಎನ್ನಲಾಗಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಕಮಲ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಆಡಿಯೋದಲ್ಲಿ ಈಗಾಗಲೇ ಮೂವರ ಹೆಸರು ಅಂತಿಮ ರೇಸ್ ನಲ್ಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಇದೀಗ ಸಿಎಂ ರೇಸ್‍ನ ಅಂತಿಮ ಸ್ಪರ್ಧೆಯಲ್ಲಿ ವಿಶ್ವೇಶ್ವರ ಕಾಗೇರಿ ಹಾಗೂ ಕೇಂದ್ರ ಮಂತ್ರಿ, ಹುಬ್ಬಳ್ಳಿ-ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರ ಹೆಸರು ಕೇಳಿ ಬಂದಿದೆ. ಇದನ್ನೂ ಓದಿ: Exclusive: ಜುಲೈ 26ಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ಸಾಧ್ಯತೆ – ರಾಜಾಹುಲಿಗೆ ಹೈಕಮಾಂಡ್ ಸೂಚನೆ!

ಸಿಎಂ ಬದಲಾವಣೆ ಜೊತೆಗೆ ಸಂಪುಟ ಪುನಾರಚನೆ ಆಗಲಿದ್ದು, ಹಿರಿಯ ಸಚಿವರಿಗೆ ಕೊಕ್ ನೀಡಲಾಗುತ್ತೆ. ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್.ಈಶ್ವರಪ್ಪ ಸಂಪುಟದಿಂದ ಕೈ ಬಿಡುವ ಸುಳಿವನ್ನು ಆಡಿಯೋ ನೀಡಿದೆ. ಇದನ್ನೂ ಓದಿ: ಈಶ್ವರಪ್ಪ, ಜಗದೀಶ್ ಶೆಟ್ಟರ್ ಎರಡು ಕಣ್ಣುಗಳಿದ್ದಂತೆ: ನಳಿನ್ ಕುಮಾರ್ ಕಟೀಲ್

ಆಡಿಯೋದಲ್ಲಿ ಏನಿದೆ?:
ಯಾರಿಗೂ ಹೇಳಬೇಡ ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಅವರ ಟೀಮ್‍ನ್ನು ತೆಗೆಯುತ್ತೇವೆ. ಹೊಸ ತಂಡವನ್ನು ಕಟ್ಟುತ್ತೇವೆ. ಈಗ ಸದ್ಯಕ್ಕೆ ಯಾರಿಗೂ ಹೇಳಬೇಡ. ದೆಹಲಿಯಿಂದನೇ ಮಾಡುತ್ತಾರೆ. ಏನೂ ಸಮಸ್ಯೆ ಇಲ್ಲ, ಭಯಪಡಬೇಡ, ನಾವಿದ್ದೇವೆ. ಯಾರೇ ಆದ್ರೂ ಎಲ್ಲ ನಮ್ಮ ಕೈಯಲ್ಲೇ ಇರುತ್ತೆ. ಮೂರು ಹೆಸರು ಇದೆ, ಇದರಲ್ಲಿ ಯಾರಾದರೂ ಆಗುವ ಛಾನ್ಸ್ ಇದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ ಎನ್ನಲಾದ ಆಡಿಯೋ ಇದೀಗ ಸಖತ್ ವೈರಲ್ ಆಗಿದೆ.  ಇದನ್ನೂ ಓದಿ: ಮುಂದಿನ ಸಿಎಂ ಸ್ಥಾನಕ್ಕೆ ಹೆಸರುಗಳು ಪಟ್ಟಿ ರೆಡಿಯಾಗಿದೆಯಾ? ಆಡಿಯೋದಲ್ಲಿ ಹೇಳಿದ ಮೂವರು ಯಾರು?

The post ಸಿಎಂ ರೇಸ್‍ನ ಅಂತಿಮ ಸ್ಪರ್ಧೆಯಲ್ಲಿ ಇಬ್ಬರು ನಾಯಕರು – ಯಾರಿಗೆ ಒಲಿಯುತ್ತೆ ಅದೃಷ್ಟ? appeared first on Public TV.

Source: publictv.in

Source link