ಎಂ.ಪಿ. ರೇಣುಕಾಚಾರ್ಯ
ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರಿ ಇದೆ ಎಂದಿರುವ ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿ ಮತ್ತು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ. ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ. ಅದರಲ್ಲಿ ಬಹಳ ಕೆಲಸ ಇಲ್ಲ, ನಾನೂ ಏನೂ ಅದಕ್ಕೇ ಅಂಟಿಕೊಂಡಿಲ್ಲ. ಸಿಎಂ ಹೊರತುಪಡಿಸಿ ಕೆಲವರ ಬದಲಾವಣೆ ಆಗಬೇಕು. ಅದೇ ಮುಖ ನೋಡಿ ನೋಡಿ ಸಾಕಾಗಿದೆ ಜನರಿಗೆ ಎಂದು ಹೇಳಿದ್ದಾರೆ.