ಸಿಡಿಲಿನ ಆಘಾತದಿಂದ ತಪ್ಪಿಸಿಕೊಳ್ಳುವುದು ಹೇಗೆ? ಈ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿದುಕೊಳ್ಳಿ | Be alert while Lightening Preventive measures to save from Lightening Heavy Rainfall know more in Kannada


ಸಿಡಿಲಿನ ಆಘಾತದಿಂದ ತಪ್ಪಿಸಿಕೊಳ್ಳುವುದು ಹೇಗೆ? ಈ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿದುಕೊಳ್ಳಿ

ಪ್ರಾತಿನಿಧಿಕ ಚಿತ್ರ

ಸಿಡಿಲಿನಿಂದ ಸಾವು ನೋವು ಸಂಭವಿಸಿದ ಪ್ರಕರಣಗಳು ಇತ್ತೀಚೆಗೆ ಅಧಿಕವಾಗುತ್ತಿದೆ. ಮಳೆ, ಬಿರುಗಾಳಿ, ಗುಡುಗು ಸಹಿತ ಮಳೆಯು ಬೆಂಗಳೂರು ಹಾಗೂ ರಾಜ್ಯದ ವಿವಿಧ ಕಡೆಗಳಲ್ಲಿ ಆಗುತ್ತಿರುವುದರಿಂದ ಅವಘಡಗಳು ಹೆಚ್ಚಾಗಿದೆ. ಮಳೆಯಿಂದ ಉಂಟಾಗುತ್ತಿರುವ ಹಾನಿಯ ಬಗ್ಗೆ ತಿಳಿದಿರಬೇಕಾದ ಅಗತ್ಯವಿದೆ. ಸಿಡಿಲಿನಿಂದ ಮನುಷ್ಯರು ಮಾತ್ರ ಅಲ್ಲದೆ ವಿವಿಧ ಪಶು, ಪ್ರಾಣಿಗಳು ಕೂಡ ಸಾಯುತ್ತಿವೆ. ಮರಗಳೂ ಹೊತ್ತಿ ಉರಿದು ಭಸ್ಮವಾಗುತ್ತವೆ. ಸಿಡಿಲಿನಿಂದ ಆಗುವ ಹಾನಿಗಳ ಬಗ್ಗೆ ತಿಳಿದಿರುವ ನಾವು ಅದರಿಂದ ರಕ್ಷಣೆ ಪಡೆದುಕೊಳ್ಳಬೇಕಾದ ಅವಕಾಶಗಳನ್ನು ಕೂಡ ತಿಳಿದಿರಬೇಕು. ಆ ಬಗ್ಗೆ ಇಲ್ಲಿ ವಿವರಣೆ ನೀಡಲಾಗಿದೆ.

ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ, ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಬಹುದು. ಸಿಡಿಲಿನಿಂದ ರಕ್ಷಣೆ_ಹೇಗೆ ಸಾಧ್ಯ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

  • ಗುಡುಗು- ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ. ನಿಲ್ಲಬೇಡಿ
  • ತಗ್ಗು ಪ್ರದೇಶ ಇಲ್ಲದೆ ಬಯಲಿನಲ್ಲೆ ಇರಬೇಕಾದರೆ ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ, ಇದು ಮಿಂಚಿನಿಂದ ಮೆದುಳಿಗೂ, ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ
  • ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ, ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು. (ಯಾಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.
  • ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿಯಿರಿ
  • ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ, ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ, (ಯಾಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷನನ್ನೇ ಆರಿಸಿಕೊಳ್ಳುತ್ತದೆ)
  • ಕೆರೆಯಲ್ಲಿ ಈಜುವುದು, ಸ್ನಾನ ಮಾಡುವುದು ಬೇಡ, ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ
  • ವಿದ್ಯುತ್ ಕಂಬ, ಎಲಕ್ಟ್ರಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್​ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ
  • ತಂತಿಬೇಲಿ, ಬಟ್ಟೆ ಒಣಹಾಕುವ ತಂತಿ, ಇವುಗಳಿಂದ ದೊರವಿರಿ
  • ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸನ್ನು ಸ್ವಚ್ಛ ಮಾಡುವ ಸಾಹಸ ಬೇಡ
  • ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ
  • ಗುಡುಗು- ಸಿಡಿಲಿನ ಸಂದರ್ಭದಲ್ಲಿ ಫೋನ್ ಮಾಡಬೇಡಿ. ಅದನ್ನು ಚಾರ್ಜ್ ಮಾಡುವ ಸಾಹಸವೂ ಬೇಡ
  • ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು
  • ಕಂಪ್ಯೂಟರ್​​ಗಳಿಂದ ದೂರ ಇರಿ
  • ಮನೆಯ ಕಾoಕ್ರೇಟ್ ಗೋಡೆಗಳನ್ನು ಸ್ಪೆರ್ಶಿಸದೆ. ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ

ಸಿಡಿಲಿನಿಂದ ನಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ, ಕಂದಾಯ ಇಲಾಖೆ, ಕರ್ನಾಟಕ ಸರ್ಕಾರ ಈ ರೀತಿ ಪ್ರಕಟಣೆಯನ್ನು ಹಂಚಿಕೊಂಡಿದೆ. ಇದನ್ನು ಪಾಲಿಸುವುದು ಈ ಕಾಲದಲ್ಲಿ ಆಗುವ ಯಾವುದೇ ಸಮಸ್ಯೆಯನ್ನು ತಪ್ಪಿಸಲು ಉತ್ತಮ. ನೀವು ಬಯಲಿನಲ್ಲಿ ಇದ್ದರೆ, ಕೆಲಸ ಮಾಡುತ್ತಿದ್ದರೆ, ಪ್ರಾಣಿಗಳ ಮಧ್ಯೆ ಇದ್ದರೆ, ವಾಹನದಲ್ಲಿ ಹೋಗುತ್ತಿದ್ದರೆ, ಕಂಪ್ಯೂಟರ್ ಕೆಲಸ ಮಾಡುತ್ತಿದ್ದರೆ, ಮೊಬೈಲ್ ಫೋನ್ ಬಳಸುತ್ತಿದ್ದರೆ ಏನೇನು ಎಚ್ಚರಿಕೆ ಕೈಗೊಳ್ಳಬೇಕು ಎಂದು ಇಲ್ಲಿನ ಮಾಹಿತಿ ತಿಳಿದುಕೊಂಡು ಪಾಲಿಸಿ.

TV9 Kannada


Leave a Reply

Your email address will not be published. Required fields are marked *