ಸಿದ್ದಗಂಗಾ ಮಠಕ್ಕೆ ವಿಜಯೇಂದ್ರ ದಿಢೀರ್ ಭೇಟಿ

ತುಮಕೂರು: ಸಿಎಂ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಸಿದ್ದಗಂಗಾ ಮಠಕ್ಕೆ ದಿಢೀರ್ ಭೇಟಿ ನೀಡಿದ್ದಾರೆ.

ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಮಾರ್ಗ ಮಧ್ಯೆ ಮಠಕ್ಕೆ ಭೇಟಿ ಕೊಟ್ಟು, ಸಿದ್ದಗಂಗಾ ಶ್ರೀಗಳ ಗದ್ದುಗೆಯ ದರ್ಶನ ಪಡೆದರು. ಬಳಿಕ ಶ್ರೀ ಸಿದ್ದಲಿಂಗ ಸ್ವಾಮೀಜಿಯೊಂದಿಗೆ ಕೆಲಕಾಲ ಚರ್ಚಿಸಿದರು. ರಾಜಕೀಯ ಬೆಳವಣಿಗೆಗಳ ನಡುವೆ ಇದ್ದಕ್ಕಿದ್ದಂತೆ ವಿಜಯೇಂದ್ರ ಅವರು ಮಠಕ್ಕೆ ಭೇಟಿ ಕೊಟ್ಟಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಬಿ.ವೈ.ವಿಜಯೇಂದ್ರ ಅವರು ಸಿದ್ದಗಂಗಾ ಶ್ರೀಗಳ ಜೊತೆ ಸುಮಾರು 30 ನಿಮಿಷಗಳ ಕಾಲ ಮಾತನಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಮಾಧ್ಯಮಕ್ಕೂ ವಿಚಾರ ತಿಳಿಸದೇ ಇದ್ದಕ್ಕಿದ್ದಂತೆ ವಿಜಯೇಂದ್ರ ಸ್ವಾಮೀಜಿ ಭೇಟಿ ಮಾಡಿದ್ದಾರೆ. ವಿಜಯೇಂದ್ರ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸುರೇಶ್ ಗೌಡ ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದರು.

The post ಸಿದ್ದಗಂಗಾ ಮಠಕ್ಕೆ ವಿಜಯೇಂದ್ರ ದಿಢೀರ್ ಭೇಟಿ appeared first on Public TV.

Source: publictv.in

Source link