ಬೆಂಗಳೂರು: ಅನಾರೋಗ್ಯಕ್ಕೆ ಒಳಗಾಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೊರೊನಾ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ ಎಂಬ ಮಾಹಿತಿ ನ್ಯೂಸ್​ಫಸ್ಟ್​ಗೆ ಲಭಿಸಿದೆ.

ನಿನ್ನೆ ರಾತ್ರಿ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಗಂಟಲು ದ್ರವ ಮಾದರಿಯನ್ನ ಪರೀಕ್ಷೆ ರವಾನಿಸಲಾಗಿತ್ತು. ಸದ್ಯ ಅವರ ವರದಿ ನೆಗೆಟಿವ್ ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈಗಾಗಲೇ ಒಮ್ಮೆ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಂಡಿದ್ದರು.

ಇನ್ನು ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಉಂಟಾಗಿರೋ ಕಾರಣ ಇಂದು ನಿಗದಿಯಾಗಿದ್ದ ಅವರ ಎಲ್ಲಾ ಕಾರ್ಯಕ್ರಮಗಳನ್ನ ರದ್ದು ಮಾಡಲಾಗಿದೆ. ಇಂದು ಬೆಂಗಳೂರಿನ ನಾನಾ ಕ್ಷೇತ್ರಗಳಿಗೆ ತೆರಳಿ ಉಚಿತ ದಿನಸಿ ಕಿಟ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸದ್ಯ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಬೆಂಗಳೂರಿನ ನಾನಾ ಕ್ಷೇತ್ರಗಳಿಗೆ ತೆರಳಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಟ್​ ವಿತರಣೆ ಮಾಡಲಿದ್ದಾರೆ.

The post ಸಿದ್ದರಾಮಯ್ಯಗೆ ರಿಲೀಫ್​​.. ಕೋವಿಡ್ ಟೆಸ್ಟ್​ ವರದಿ ನೆಗೆಟಿವ್ appeared first on News First Kannada.

Source: newsfirstlive.com

Source link