ಸಿದ್ದರಾಮಯ್ಯ ಬೂಟಾಟಿಕೆ ಹೇಳಿಕೆ ನೀಡಲು ಶುರು ಮಾಡಿದ್ದಾರೆ; ಸಚಿವ ಬಿ ಶ್ರೀರಾಮುಲು ವಾಗ್ದಾಳಿ | B Sreeramulu talk about siddaramaiah and congress party in gadag


ಸಿದ್ದರಾಮಯ್ಯ ಬೂಟಾಟಿಕೆ ಹೇಳಿಕೆ ನೀಡಲು ಶುರು ಮಾಡಿದ್ದಾರೆ; ಸಚಿವ ಬಿ ಶ್ರೀರಾಮುಲು ವಾಗ್ದಾಳಿ

ಸಿದ್ದರಾಮಯ್ಯ, ಶ್ರೀರಾಮುಲು

ಗದಗ: ಸಿದ್ದರಾಮಯ್ಯ (Siddaramaiah) ಹೊಸ ಟ್ರೆಂಡ್ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಸಚಿವ ಬಿ ಶ್ರೀರಾಮುಲು (B Sreeramulu), ಸಿದ್ದರಾಮಯ್ಯ ಬೂಟಾಟಿಕೆ ಹೇಳಿಕೆ ನೀಡಲು ಶುರು ಮಾಡಿದ್ದಾರೆ ಎಂತ ವಾಗ್ದಾಳಿ ನಡೆಸಿದ್ದಾರೆ. ಅವರ ಪಕ್ಷದಲ್ಲೇ ಅವರನ್ನು ಸ್ವೀಕಾರ ಮಾಡಲು ಸಿದ್ಧರಿಲ್ಲ. ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಡಿಕೆಶಿ ಪರ ಘೋಷಣೆ ಕೂಗಿದ್ದಕ್ಕೆ ಸಿದ್ದರಾಮಯ್ಯ ಕಾರ್ಯಕ್ರಮದಿಂದ ನಿರ್ಗಮಿಸಿದ್ದಾರೆ ಅಂತ ಗದಗದಲ್ಲಿ ಸಾರಿಗೆ ಇಲಾಖೆ ಸಚಿವ ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ.

ಹಾವುಗಾರನ ರೀತಿಯಲ್ಲಿ ಸಿದ್ದರಾಮಯ್ಯ ಮಾತಾನಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಅಲೆ ಎದ್ದಿದೆೆ, ಬಿಜೆಪಿ ಕೊಚ್ಚಿ ಹೋಗುತ್ತದೆ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಅಲೆ, ಬಿರುಗಾಳಿ, ಸುನಾಮಿ ಎಲ್ಲ ಕಾಂಗ್ರೆಸ್​ಗೆ ಅನ್ವಯಿಸುತ್ತೆ. 2023ರ ಚುನಾವಣೆವರೆಗೆ ಕಾಯುವ ಅವಶ್ಯಕತೆ ಇಲ್ಲ. ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ ಅಂತ ಶ್ರೀರಾಮುಲು ಹೇಳಿದರು.

ಸಿಎಂ ಬೊಮ್ಮಾಯಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ತನಿಖೆ ಬಗ್ಗೆ ಸಿಎಂ ಆದೇಶ ಮಾಡಿದ್ದಾರೆ. ರಾಜಕೀಯ ಕೆಸರೆರಚಾಟಕ್ಕೆ ಆರೋಪಿಸುವುದು ಸರಿಯಲ್ಲ. ಸಿದ್ದರಾಮಯ್ಯರಿಂದ ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸವಾಗುತ್ತಿದೆ. ಬಿಟ್ ಕಾಯಿನ್ ಕೇಸ್​ನ ದಾಖಲೆ ಇದ್ರೆ ಬಿಡುಗಡೆ ಮಾಡಲಿ. ಆರೋಪಿ ಪಾತಾಳಕ್ಕೆ ಹೋದರೂ ಕರೆತರುವ ಶಕ್ತಿ ಸರ್ಕಾರಕ್ಕಿದೆ. ಕಾಂಗ್ರೆಸ್ ಪಕ್ಷ ಸುಳ್ಳಿನ ಫ್ಯಾಕ್ಟರಿ. ಕಾಂಗ್ರೆಸ್ನಲ್ಲಿ ಹೊಂದಾಣಿಕೆ ಇಲ್ಲ, ಮೂರು ಬಾಗಿಲಾಗಿದೆ. ಕಾಂಗ್ರೆಸ್​ನವರು ಮೊದಲು ತಮ್ಮ ಮನೆ ಸರಿಮಾಡಿಕೊಳ್ಳಲಿ ಅಂತ ಸಚಿವ ಶ್ರೀರಾಮುಲು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದುವರಿದು ಮಾತನಾಡಿದ ಶ್ರೀರಾಮುಲು, ಪಾರ್ಟ್ ಟೈಂ ಲೀಡರ್ ರೀತಿ ಸೋನಿಯಾ, ರಾಹುಲ್ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಆಲ್ ಟೈಂ ನಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಸುಳ್ಳು ಹೇಳುವ ಕಾಂಗ್ರೆಸ್ 2023ರವರೆಗೂ ಕಾಯಬೇಕಿಲ್ಲ. ಈ ಚುನಾವಣೆಯಲ್ಲೇ ಕಾಂಗ್ರೆಸ್ ಕೊಚ್ಚಿಕೊಂಡು ಹೋಗುತ್ತೆ ಅಂತ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ಸರ್ಕಾರವನ್ನು ಟೀಕಿಸುವವರು ಮತ್ತು ಹೋರಾಟಗಾರರ ಟ್ವಿಟರ್ ಖಾತೆ ಮೇಲೆ ತ್ರಿಪುರಾ ಪೊಲೀಸ್ ನಿಗಾ

ಬೆಳ್ಳಿಗಜ್ಜೆಗಾಗಿ ಮಹಿಳೆಯರ ಪಾದವನ್ನೇ ಕತ್ತರಿಸಿ, ಹತ್ಯೆ ಮಾಡುವ ಸೈಕೋಗಾಗಿ ಹುಡುಕಾಟ; ಎರಡನೇ ಘಟನೆಯ ಬೆನ್ನಲ್ಲೇ ಚುರುಕಾದ ಪೊಲೀಸರು

TV9 Kannada


Leave a Reply

Your email address will not be published. Required fields are marked *