ಸಿದ್ದರಾಮಯ್ಯ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್​ ವಾರ್; ಖಾಸಗಿ ಶಾಲೆ ಅನುಮತಿ ಪ್ರಶ್ನಿಸಿ ಪ್ರಶ್ನೆಗಳ ಸುರಿಮಳೆ | Education Minister BC Nagesh Slams on Siddaramaiah by Twitter


ವಿಕ್ಷನಾಯಕ ಸಿದ್ದರಾಮಯ್ಯ ಅವರೇ ನಿಮ್ಮ ಅಧಿಕಾರವಧಿಯಲ್ಲಿ ನೀವು ಖಾಸಗಿ CBSE ಶಾಲೆ ಆರಂಭಕ್ಕೆ ನಿಯಮವನ್ನೇ ರೂಪಿಸಲಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್ ಟ್ವೀಟ್​ ಮಾಡಿ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್​ ವಾರ್; ಖಾಸಗಿ ಶಾಲೆ ಅನುಮತಿ ಪ್ರಶ್ನಿಸಿ ಪ್ರಶ್ನೆಗಳ ಸುರಿಮಳೆ

ಶಿಕ್ಷಣ ಸಚಿವ ಬಿ ಸಿ ನಾಗೇಶ್

ಬೆಂಗಳೂರು: ವಿಕ್ಷನಾಯಕ ಸಿದ್ದರಾಮಯ್ಯ (Siddaramaiah) ಅವರೇ ನಿಮ್ಮ ಅಧಿಕಾರವಧಿಯಲ್ಲಿ ನೀವು ಖಾಸಗಿ CBSE ಶಾಲೆ ಆರಂಭಕ್ಕೆ ನಿಯಮವನ್ನೇ ರೂಪಿಸಲಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್ (BC Nagesh) ಟ್ವೀಟ್​ ಮಾಡಿ ಆರೋಪ ಮಾಡಿದ್ದಾರೆ.

ಖಾಸಗಿ CBSE ಶಾಲೆ ಆರಂಭಕ್ಕೆ NOC ನೀಡಲು ನಿಯಮ ರೂಪಿಸದೇ, ಅನಧಿಕೃತವಾಗಿ ಹಲವು ಶಾಲೆಗಳನ್ನು ಅರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ನಿಮ್ಮ ಪಾತ್ರವೇನು? ಎಂದು ಪ್ರಶ್ನಿಸಿದ್ದಾರೆ.

ಶೈಕ್ಷಣಿಕ ವಾತಾವರಣ ನಿರ್ಮಿಸಲು ಹೊರಟ ಬಿಜೆಪಿ ಸರ್ಕಾರದ ವಿರುದ್ಧ, ಹಲವು ಆರೋಪಗಳಿರುವ ಬೆಂಬಲಿಗನ ಮೂಲಕ ಆರೋಪ ಮಾಡಿಸಿ,ನಿಯಮಬಾಹಿರ ಕೆಲಸಕ್ಕೆ ಕುಮ್ಮಕ್ಕು ನೀಡುವ ನಿಮಗೆ ನೈತಿಕತೆ ಇದೆಯಾ? ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? ಎಂದು ಕಿಡಿಕಾರಿದ್ದಾರೆ.

2004ರಲ್ಲಿ ತಮಿಳುನಾಡಿನ ಕುಂಭಕೋಣಂ ಶಾಲೆಯಲ್ಲಿ ಅಗ್ನಿದುರಂತ ಹಿನ್ನೆಲೆ ಮಕ್ಕಳ ಸುರಕ್ಷತೆಯಿಂದ ಸುಪ್ರೀಂ ಕೋರ್ಟನ ನೀಡಿದ ನಿಯಮ ಮಾರ್ಗಸೂಚಿಯನ್ನೇ ಪ್ರಶ್ನಿಸುತ್ತಿದ್ದೀರಿ ? ಸಿದ್ದರಾಮಯ್ಯನವರೇ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿ ಇಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಶಾಲೆ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ಪ್ರಕ್ರಿಯೆ ಆನ್‌ಲೈನ್‌ಗೊಳಿಸಿ, ಪಾರದರ್ಶಕ ವ್ಯವಸ್ಥೆಯನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸಿದೆ. ಆದರೆ, ಶಿಸ್ತುಬದ್ಧ ವ್ಯವಸ್ಥೆಯ ಅನುಷ್ಠಾನದ ವಿರುದ್ಧವೇ ನಿಂತು, ಸಂಘಟನೆಯ ಅಧ್ಯಕ್ಷನೆಂದು ಹೇಳಿಕೊಂಡು ಓಡಾಡುವ ಬೂಟಾಟಿಕೆಯ ವ್ಯಕ್ತಿಯ ಅಕ್ರಮದಲ್ಲಿ ಸಿದ್ದರಾಮಯ್ಯ ಪಾಲೆಷ್ಟು? ಎಂದು ಟ್ವೀಟ್​ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ

TV9 Kannada


Leave a Reply

Your email address will not be published.