ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ.

ಪ್ರಾತಿನಿಧಿಕ ಚಿತ್ರ
ಬಾಗಲಕೋಟೆ: ದಾವಣಗೆರೆಯಲ್ಲಿ ನಾಳೆ (ಆಗಸ್ಟ್ 03) ನಡೆಯಲಿರೋ ಸಿದ್ದಾರಾಮೋತ್ಸವಕ್ಕೆ ಭರ್ಜರಿ ಸಿದ್ಧತೆ ನಡೀತಿದೆ. ಸಿದ್ದು ಅಮೃತ ಮಹೋತ್ಸವಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಭೇಟಿ ನೀಡ್ತಿದ್ದಾರೆ. ಆದ್ರೆ ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ. ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದವ ಎಂದು ತಿಳಿದು ಬಂದಿದೆ.
ಇನ್ನು ದುರ್ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆರೂರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.