ಸಿದ್ದರಾಮೋತ್ಸವದಿಂದ ಮರಳುವಾಗ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಿದ ಸಿದ್ದರಾಮಯ್ಯ | Siddaramaiah donates 2 lakhs to the family who died in an accident while returning from siddaramotsava in Mysuru


ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿಯ ನಿವಾಸಿ ಫಸಿವುದ್ದೀನ್ ಆಗಸ್ಟ್‌ 3ರಂದು ದಾವಣಗೆರೆಯಲ್ಲಿ ನಡೆದಿದ್ದ ಸಿದ್ದರಾಮೋತ್ಸವಕ್ಕೆ ಹೋಗಿ ಮರಳುವಾಗ ಅಪಘಾತದಲ್ಲಿ ಮೃತಪಟ್ಟಿದ್ದರು.

ಸಿದ್ದರಾಮೋತ್ಸವದಿಂದ ಮರಳುವಾಗ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಿದ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿದ್ದರಾಮೋತ್ಸವದಿಂದ(Siddaramotsava) ಮರಳಿದ್ದಾಗ ಅಪಘಾತದಲ್ಲಿ ವ್ಯಕ್ತಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಮೃತ ಫಸಿವುದ್ದೀನ್ ನಿವಾಸಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ. ಹಾಗೂ ಫಸಿವುದ್ದೀನ್ ಕುಟುಂಬಕ್ಕೆ ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಇನ್ನು ಶಾಸಕ ಜಮೀರ್‌ ಕೂಡ 5 ಲಕ್ಷ ಪರಿಹಾರ ನೀಡ್ತಾರೆ ಎಂದು ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿಯ ನಿವಾಸಿ ಫಸಿವುದ್ದೀನ್ ಆಗಸ್ಟ್‌ 3ರಂದು ದಾವಣಗೆರೆಯಲ್ಲಿ ನಡೆದಿದ್ದ ಸಿದ್ದರಾಮೋತ್ಸವಕ್ಕೆ ಹೋಗಿ ಮರಳುವಾಗ ಅಪಘಾತದಲ್ಲಿ ಮೃತಪಟ್ಟಿದ್ದರು. ಮೃತ ಫಸಿ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿ ಪರಿಹಾರ ನೀಡಿ ಸಾಂತ್ವನಿಸಿದ್ದಾರೆ. ಆಗಸ್ಟ್ 17ರಂದು ಶಾಸಕ ಜಮೀರ್‌ ಭೇಟಿಯಾಗಿ ಫಸಿವುದ್ದೀನ್ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುತ್ತಾರೆ. ಹಾಗೂ ಘಟನೆಯಲ್ಲಿ ಗಾಯಗೊಂಡ ಎಲ್ಲಾ ಗಾಯಾಳುಗಳ ಚಿಕಿತ್ಸಾ ವೆಚ್ಚ ಸಂಪೂರ್ಣ ಭರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಘಟನೆ ವಿವರ

ಸಿದ್ದರಾಮಯ್ಯರ 75ನೇ ಜನ್ಮದಿನ ಹಿನ್ನೆಲೆ ದಾವಣಗೆರೆಯಲ್ಲಿ ನಡೆದ ಅಮೃತ ಮಹೋತ್ಸವ/ಸಿದ್ದರಾಮೋತ್ಸವ ಕಾರ್ಯಕ್ರಮ ಮುಗಿಸಿ ಹಿಂದಿರುವಾಗ ಅಪಘಾತ ಸಂಭವಿಸಿದ್ದು, ಒಬ್ಬರು ಮೃತಪಟ್ಟಿದ್ದರು. ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಗೂಡ್ಸ್ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅಡಗನಹಳ್ಳಿ ಗ್ರಾಮದ ಫಸಿವುದ್ದೀನ್ (51) ಮೃತಪಟ್ಟಿದ್ದರು. ಫಸಿ ಸ್ನೇಹಿತರ ಜೊತೆ ಕಾರ್ಯಕ್ರಮಕ್ಕೆ ಹೋಗಿದ್ದ. ಅಪಘಾತದಲ್ಲಿ 8 ಜನರಿಗೆ ಗಾಯಗಳಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಗಂಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿತ್ತು.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *