ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ.. ಹವಾಮಾನ ಇಲಾಖೆ ಹೇಳಿದ್ದೇನು..?

ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ.. ಹವಾಮಾನ ಇಲಾಖೆ ಹೇಳಿದ್ದೇನು..?

ಬೆಂಗಳೂರು: ಮಧ್ಯಾಹ್ನದ ವೇಳೆಗೆ ರಾಜಧಾನಿ ಬೆಂಗಳೂರಲ್ಲಿ ಭಾರೀ ಮಳೆಯಾಗಿದೆ. ಗಾಳಿ-ಮಳೆ ಜೋರಾಗಿದ್ದು, ನಗರದ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ.

ಶಾಂತಿನಗರ, ಸಂಪಂಗಿರಾಮನಗರ, ಕಾರ್ಪೂರೇಷನ್, ಎಂ.ಜಿ. ರಸ್ತೆ, ಮೆಜೆಸ್ಟಿಕ್, ಮಾರ್ಕೆಟ್, ಚಾಮರಾಜಪೇಟೆ, ಶ್ರೀನಿವಾಸನಗರ, ಕತ್ರಿಗುಪ್ಪೆ ಸೇರಿದಂತೆ ನಗರದ ಹಲವು ಏರಿಯಾಗಳಲ್ಲಿ ಧಾರಾಕಾರ ಮಳೆಯಾಗಿದೆ.

ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.​ ಪಾಟೀಲ್ ಮಾಹಿತಿ ನೀಡಿದ್ದಾರೆ. ಮಾತ್ರವಲ್ಲ ರಾಜ್ಯದ ವಿವಿಧ ಭಾಗಗಳಲ್ಲೂ ವ್ಯಾಪಕ ಮಳೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.

The post ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ.. ಹವಾಮಾನ ಇಲಾಖೆ ಹೇಳಿದ್ದೇನು..? appeared first on News First Kannada.

Source: newsfirstlive.com

Source link