ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕಾನ್ಫೆಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ ವತಿಯಿಂದ ಸಾಂಸ್ಥಿಕ-ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಸಿ.ವಿ.ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ 56 ಐಸಿಯು ಬೆಡ್‍ಗಳ ಸೌಲಭ್ಯವನ್ನು ಲೋಕಾರ್ಪಣೆ ಮಾಡಿದ್ರು.

ಜೊತೆಗೆ  ಇಂದಿರಾನಗರದ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲಿ ಕೈಗಾರಿಕೋದ್ಯಮಿಗಳು ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಸಹಯೋಗದಲ್ಲಿ ಒದಗಿಸಲಾಗಿರುವ 24 ಐ.ಸಿ.ಯು. ಬೆಡ್‍ಗಳನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಲೋಕಾರ್ಪಣೆಗೊಳಿಸಿದರು.

ಈ ವೇಳೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ವಸತಿ ಸಚಿವ ವಿ. ಸೋಮಣ್ಣ, ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಅರವಿಂದ್ ಲಿಂಬಾವಳಿ, ಸಂಸದ ಪಿ.ಸಿ ಮೋಹನ್, ಸಿ.ಐ.ಐ ಅಧ್ಯಕ್ಷ ರಮೇಶ್ ರಾಮದುರೈ ನಾರಾಯಣ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಹಾಗೂ ಬಿಬಿಎಂಪಿ ಆಯುಕ್ತ ಗೌರವ ಗುಪ್ತ ಉಪಸ್ಥಿತರಿದ್ದರು.

The post ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ 56, ಇಂದಿರಾನಗರದಲ್ಲಿ 24 ICU ಬೆಡ್ ಸೌಲಭ್ಯ ಲೋಕಾರ್ಪಣೆ appeared first on News First Kannada.

Source: newsfirstlive.com

Source link