ಮಂಗಳೂರಿನ ಸುರತ್ಕಲ್ನಲ್ಲಿ ಫಾಜೀಲ್ ಹತ್ಯೆ ಹಿನ್ನೆಲೆ ಸಂಜೆ 6 ರಿಂದ ಬೆಳಗ್ಗೆ 6 ವರಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಮಂಗಳೂರಿನಲ್ಲಿ ಹೈ ಅಲರ್ಟ್
ಮಂಗಳೂರು: ಮಂಗಳೂರಿನ ಸುರತ್ಕಲ್ನಲ್ಲಿ ಫಾಜೀಲ್ ಹತ್ಯೆ ಹಿನ್ನೆಲೆ ಸಂಜೆ 6 ರಿಂದ ಬೆಳಗ್ಗೆ 6 ವರಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟು ಬಂದ್ ಆಗಿರಲಿದೆ. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ಜಿಲ್ಲಾದ್ಯಂತ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿಗಳು ಬಂದ್ ಮಾಡಲು ಆದೇಶ ಹೊರಡಿಸಿದ್ದರು. ಈಗ ನೈಟ್ ಕರ್ಫ್ಯೂ ಜಾರಿಯಿಂದಾಗಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧವಾದಂತಾಗಿದೆ.
ಮಂಗಳೂರಿನಲ್ಲಿ ಎಲ್ಲವೂ ಬಂದ್
ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿಗಳು ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಇಂದಿನಿಂದ(ಜುಲೈ 29) ಆಗಸ್ಟ್ 1ರ ಬೆಳಗ್ಗೆ 6ರವರೆಗೆ ಆದೇಶ ಅನ್ವಯವಾಗಲಿದೆ. ತುರ್ತು ಸೇವೆಗಳನ್ನ ಹೊರತು ಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಮಾಡಲು ತಿಳಿಸಲಾಗಿದೆ. ಹಾಗೂ ಎಲ್ಲಾ ಗ್ರಾ.ಪಂ. ಮತ್ತು ಸ್ಥಳೀಯ ಸಂಸ್ಥೆಗಳಿಗೂ ಈ ಆದೇಶ ಅನ್ವಯವಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧ
ಇಡೀ ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಈಗಾಗಲೇ ಬಜ್ಪೆ, ಪಣಂಬೂರು, ಮುಲ್ಕಿ ಸುರತ್ಕಲ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದು ಜಿಲ್ಲೆಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.