ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿಯ ಎರಡನೇ ಪಂದ್ಯ ಇಂದು ನಡೆಯಲಿದೆ. ಈ ನಡುವೆ ಟೂರ್ನಿ ಆರಂಭಕ್ಕೂ ಮುನ್ನ ಗಾಯದ ಕಾರಣದಿಂದ ಸ್ಫೋಟಕ ಆಟಗಾರ ಸೂರ್ಯಕುಮಾರ್ ಯಾದವ್ ಹಾಗೂ ಬೌಲರ್ ದೀಪಕ್ ಚಹರ್ ಟೂರ್ನಿಯಿಂದ ಹೊರಬಿದ್ದಿದ್ದರು. ಈ ನಡುವೆ ಎರಡನೇ ಪಂದ್ಯಕ್ಕೂ ಮುನ್ನ ಯುವ ಆಟಗಾರ ಋತುರಾಜ್ ಗಾಯಕ್ವಾಡ್ ಅವರು ಕೂಡ ಗಾಯದ ಸಮಯದಿಂದ ಹೊರಬಿದ್ದಿದ್ದಾರೆ.
ಈ ಕುರಿತು ಬಿಸಿಸಿಐ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಟಿ-20 ಸರಣಿಯಿಂದ ಋತುರಾಜ್ ಗಾಯಕ್ವಾಡ್ ಹೊರಬಿದ್ದಿದ್ದಾರೆ. ಅವರ ಸ್ಥಾನದಲ್ಲಿ ಮಯಾಂಕ್ ಅರ್ಗವಾಲ್ ಅವರನ್ನು ರೀಪ್ಲೇಸ್ ಮಾಡಲಾಗಿದೆ ಎಂದು ತಿಳಿಸಿದೆ. ಇನ್ನು ಋತುರಾಜ್ ಅವರಿಗೆ ಬೆಂಗಳೂರಿನ ಎನ್ಸಿಎಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿವರಣೆ ನೀಡಿದೆ.
ಋತುರಾಜ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನ ಇನ್ನು ಟೇಕ್ಆಫ್ ಆಗೋದು ಬಾಕಿ ಇದ್ದು, ಈ ನಡುವೆಯೇ ಋತುರಾಜ್ ಅವರಿಗೆ ಗಾಯದ ಸಮಸ್ಯೆಗಳು ತಲೆನೋವಾಗಿ ಪರಿಣಮಿಸಿದೆ. ಟೀಂ ಇಂಡಿಯಾ ಪರ ಋತುರಾಜ್ 3 ಟಿ-20 ಪಂದ್ಯಗಳನ್ನಷ್ಟೇ ಆಡಿದ್ದಾರೆ. ಉಳಿದಂತೆ ಧರ್ಮಶಾಲಾದಲ್ಲಿ ಇಂದು ಶ್ರೀಲಂಕಾ ವಿರುದ್ಧದ ಎರಡನೇ ಟಿ-20 ಪಂದ್ಯ ನಡೆಯಲಿದ್ದು, ಈಗಾಗಲೇ ಮೊದಲ ಟಿ-20ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರೋ ಟೀಂ ಇಂಡಿಯಾ ಸರಣಿ ಗೆಲುವಿನ ನಿರೀಕ್ಷೆಯಲ್ಲಿದೆ.