ಸೆ. 26 ಕ್ಕೆ‌ ರಾಷ್ಟ್ರಪತಿ ದ್ರೌಪದಿ‌ ಮುರ್ಮು ಹುಬ್ಬಳ್ಳಿಗೆ ಭೇಟಿ : ಹು-ಧಾ ಮಹಾನಗರ ಪಾಲಿಕೆ ಮೇಯರ್ | President Draupadi Murmu will visit Hubli on September 26th


ಸೆ. 26 ಕ್ಕೆ‌ ರಾಷ್ಟ್ರಪತಿ ದ್ರೌಪದಿ‌ ಮುರ್ಮು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಹೇಳಿದ್ದಾರೆ.

ಸೆ. 26 ಕ್ಕೆ‌ ರಾಷ್ಟ್ರಪತಿ ದ್ರೌಪದಿ‌ ಮುರ್ಮು ಹುಬ್ಬಳ್ಳಿಗೆ ಭೇಟಿ : ಹು-ಧಾ ಮಹಾನಗರ ಪಾಲಿಕೆ ಮೇಯರ್

ರಾಷ್ಟ್ರಪತಿ ದ್ರೌಪದಿ‌ ಮುರ್ಮು

ಧಾರವಾಡ : ಸೆ. 26 ಕ್ಕೆ‌ ರಾಷ್ಟ್ರಪತಿ ದ್ರೌಪದಿ‌ ಮುರ್ಮು (Draupadi Murmu) ಹುಬ್ಬಳ್ಳಿಗೆ (Hubli) ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubli-Dharwad Municipal Corporation) ಮೇಯರ್ ಈರೇಶ್ ಅಂಚಟಗೇರಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮುರವರು ಹುಬ್ಬಳ್ಳಿ ಧಾರವಾಡ ನಗರಕ್ಕೆ ಭೇಟಿ ನೀಡುತ್ತಿರುವ ಮೂರನೇ ರಾಷ್ಟ್ರಪತಿಗಳಾಗಿದ್ದಾರೆ. ಈ ಹಿಂದೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಡಾ. ಎ. ಪಿಜೆ ಅಬ್ದುಲ್‌ ಕಲಾಂ ಭೇಟಿ ನೀಡಿದ್ದರು ಎಂದು ಹೇಳಿದರು.

ರಾಷ್ಟ್ರಪತಿಯವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ‌ಪಾಲಿಕೆಯಿಂದ ಪೌರಸನ್ಮಾನ ಏರ್ಪಡಿಸಲಾಗಿದೆ ಎಂದು ತಿಳಿಸಿದರು. ರಾಷ್ಟ್ರಪತಿಗಳಿಗೆ ನೆನಪಿನ ಕಾಣಿಕೆಯಾಗಿ ಸಿದ್ಧಾರೂಢರ 1.5ಕೆಜಿ ಬೆಳ್ಳಿಯ ಮೂರ್ತಿಯನ್ನು ನೀಡಲಾಗುತ್ತದೆ. ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಜಿಮ್‌ಖಾನಾ ಮೈದಾನದಲ್ಲಿ‌ 70 ನಿಮಿಷಗಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅಂದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಪೌರಸನ್ಮಾನ ಕಾರ್ಯಕ್ರಮದಲ್ಲಿ 5 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. 500 ಜನ ಪೌರ ಕಾರ್ಮಿಕರಿಗೆ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಧಾರವಾಡ ಐಐಟಿಗೆ ಭೇಟಿ ನೀಡಿ 400 ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಲಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.