ಸೈದಾಪುರ- ಹೀಗೊಂದು ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ, ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ಚಿತ್ರದ ಹಾಡುಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಶ್ರೀರಾಮ್‌ ಈ ಚಿತ್ರದ ನಿರ್ದೇಶಕರು. ಭಾನುಪ್ರಕಾಶ್‌ ನಾಯಕರಾಗಿ ನಟಿಸಿದ್ದಾರೆ. ಹಾಡುಗಳ ಬಿಡುಗಡೆ ದಿನ ತಮ್ಮ ಸಹೋದರ ನನ್ನು ನೆನೆದು ಭಾವುಕರಾದರು ಭಾನು ಪ್ರಕಾಶ್‌. “ನನ್ನ ಅಣ್ಣ ಕೂಡ ಒಂದು ಸಿನಿಮಾ ಮಾಡಿದ್ದ. ಚಿತ್ರ ತೆರೆಗೆ ಬರುವ ಮುಂಚೆಯೇಅವನು ನಮ್ಮನ್ನು ಬಿಟ್ಟು ಹೋದ. ಈ ಸಂಕಟ ನಮ್ಮ ಕುಟುಂಬನ್ನು ಇಂದಿಗೂ ಕಾಡುತ್ತಿದೆ ಎಂದರು.

ಇದನ್ನೂ ಓದಿ : ಮಂಚಕ್ಕೆ ಕರೆದಿದ್ದನಂತೆ ಆ ನಿರ್ದೇಶಕ : ಕರಾಳ ಅನುಭವ ಬಿಚ್ಚಿಟ್ಟ ನಟಿ ಪ್ರಾಚಿ

ಅಣ್ಣನ ನಿಧನದ ನಂತರ ಊರಿನ ಕೆಲವರು ನಮ್ಮನ್ನು ನೋಡುತ್ತಿದ್ದ ದೃಷ್ಟಿಯೇ ಬೇರೆ ಆಯಿತು. ನಮ್ಮನ್ನು ನೋಡಿ ನಗುವವರ ಮುಂದೆ ಎದ್ದು ನಿಲ್ಲಬೇಕು ಎಂದು ನಾನು ಈ ಸಿನಿಮಾದಲ್ಲಿ ನಟಿಸಿದ್ದೇನೆ’ ಎಂದರು.

ಈ ಚಿತ್ರದಲ್ಲಿ ಸಂಗೀತಾ ನಾಯಕಿಯಾಗಿ ನಟಿಸಿದ್ದಾರೆ. ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಪ್ರೀತಿಯ ಬಲೆಗೆ ಬಿದ್ದಾಗ ಮುಂದೆ ಏನಾಗುತ್ತದೆ ಎನ್ನುವುದೇ ಚಿತ್ರದ ಕಥಾ ಸಾರಾಂಶ. ಅಶೋಕ್‌ ಬಿ ಹಾಗೂ ಅಬ್ದುಲ್‌ ರೋಫ್ ಸಿದ್ವಿಕ್‌ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಮಾಣಿಕ್ಯ ಪ್ರಭು, ತಮ್ಮುಡು ಸಾಯಿಛಾಯಾಗ್ರಹಣ, ಬಾಲು ನೃತ್ಯ ನಿರ್ದೇಶನ ಹಾಗೂ ಕವಿತ ಬಂಡಾರಿ ಸಂಕಲನವಿರುವ ಈ ಚಿತ್ರಕ್ಕೆ ರಾಜ್‌ ಭಾಸ್ಕರ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ.

ಸಿನೆಮಾ – Udayavani – ಉದಯವಾಣಿ
Read More