ದಾವಣಗೆರೆ: ಜಿಲ್ಲೆಯ ಕೋವಿಡ್ ಕೇರ್ ಸೆಂಟರ್​​​ನಲ್ಲಿರುವ ಸೋಂಕಿತರಿಗೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ನಿನ್ನೆ ಸಂಗೀತ ರಸಮಂಜರಿ ಕಾರ್ಯಕ್ರಮ ಏರ್ಪಡಿಸಿದ್ದರು.

 

ಹೊನ್ನಾಳಿ ತಾಲೂಕಿನ ಹೆಚ್.ಕಡದಕಟ್ಟೆ ಗ್ರಾಮದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಕೋವಿಡ್ ಕೇರ್ ಸೆಂಟರ್​ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕೊರೊನಾ ಸೋಂಕಿತರು ಚಿತ್ರಗೀತೆಗಳನ್ನ ಕೇಳುವ ಮೂಲಕ ಖುಷಿ ಪಟ್ಟರು. ಅಲ್ಲದೆ ಶಾಸಕ ರೇಣುಕಾಚಾರ್ಯ ಸ್ವತಃ ಡ್ಯಾನ್ಸ್ ಕೂಡ ಮಾಡಿದ್ರು.

ಡಾ. ರಾಜ್​ಕುಮಾರ್ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಶಾಸಕರೊಂದಿಗೆ ರೋಗಿಗಳು ಸಖತ್​ ಸ್ಟೆಪ್ಸ್​ ಹಾಕಿದ್ರು.

The post ಸೋಂಕಿತರಿಗೆ ಆತ್ಮಸ್ಥೈರ್ಯ: ಅಣ್ಣಾವ್ರ ಹಾಡಿಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ appeared first on News First Kannada.

Source: newsfirstlive.com

Source link