ಸೋನಿಯಾ ಗಾಂಧಿ ಭೇಟಿಯಾದ ಡಿಕೆಎಸ್​​ -ಹೇಳಿದ್ದೇನು..?


ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನೀಡಿದ್ದಾರೆ.

ನವದೆಹಲಿಯ ಸೋನಿಯಾ ನಿವಾಸದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿರುವ ಫೋಟೋವನ್ನು ಟ್ವೀಟ್​ ಮಾಡಿರುವ ಡಿಕೆಎಸ್​, ದಿಲ್ಲಿಯಲ್ಲಿಂದು ಎಐಸಿಸಿ ಅಧ್ಯಕ್ಷೆ ಶ್ರೀಮತಿ ಸೋನಿಯಾಗಾಂಧಿ ಅವರನ್ನು ಭೇಟಿಯಾಗುವ ಅವಕಾಶ ದೊರೆಯಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅವರೊಂದಿಗೆ ಚರ್ಚೆ ನಡೆಸಿದೆ ಎಂದು ಬರೆದುಕೊಂಡಿದ್ದಾರೆ.

ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಎಸ್​​, ಸೋನಿಯಾ ಗಾಂಧಿ ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ. ಪ್ರಮುಖವಾಗಿ ವಿಧಾನ ಪರಿಷತ್ ಅಭ್ಯರ್ಥಿಗಳ ಬಗ್ಗೆ ಚರ್ಚೆ ಆಗಿದೆ. ರಾಜ್ಯ ಉಸ್ತುವಾರಿ ಜೊತೆ ಚರ್ಚಿಸಿ ಅಭ್ಯರ್ಥಿಗಳನ್ನು ಪ್ರಕಟಿಸುತ್ತಾರೆ. 2-3 ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲಾ ಅಭ್ಯರ್ಥಿಗಳ ಹೆಸರು ಒಂದೇ ಬಾರಿಗೆ ಪ್ರಕಟ ಆಗುತ್ತೆ. ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೊಂದಣಿ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು.

News First Live Kannada


Leave a Reply

Your email address will not be published. Required fields are marked *