ಸೋನಿಯಾ ಮಾತ್ರವಲ್ಲ ಯಡಿಯೂರಪ್ಪ, ವಿಜಯೇಂದ್ರ ಕೂಡ ಜೈಲಿಗೆ ಹೋಗುತ್ತಾರೆ: ಹೊಸ ಬಾಂಬ್ ಸಿಡಿಸಿದ ಯತ್ನಾಳ್ | Not only Sonia Gandhi BSY, Vijayendra also goes to jail said by yatnal


ಸೋನಿಯಾ ಮಾತ್ರವಲ್ಲ ಯಡಿಯೂರಪ್ಪ, ವಿಜಯೇಂದ್ರ ಕೂಡ ಜೈಲಿಗೆ ಹೋಗುತ್ತಾರೆ: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಬಸವನಗೌಡ ಪಾಟೀಲ್ ಯತ್ನಾಳ್

ಸೋನಿಯಾ ಗಾಂಧಿ ಮಾತ್ರವಲ್ಲ, ಯಡಿಯೂರಪ್ಪ ಮತ್ತು ವಿಜಯೇಂದ್ರ ಕೂಡ ಜೈಲಿಗೆ ಹೋಗುತ್ತಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಹಾವೇರಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa) ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y.Vijayendra) ಅವರ ವಿರುದ್ಧ ಗುಡುಗಿರುವ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basavana gowda Patil Yatnal), ಸೋನಿಯಾ ಗಾಂಧಿ (Sonia Gandhi) ಮಾತ್ರವಲ್ಲ, ಯಡಿಯೂರಪ್ಪ ಮತ್ತು ವಿಜಯೇಂದ್ರ ಕೂಡ ಜೈಲಿಗೆ ಹೋಗುತ್ತಾರೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಆಪ್ತ ಉಮೇಶ್ ಮನೆಯಲ್ಲಿ ಸಿಕ್ಕ ಕೋಟ್ಯಾಂತರ ರೂ. ಬಿಎಸ್​ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ಸೇರಿದ್ದು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಾವೇರಿ‌ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್​ನವರು ಮಾತ್ರವಲ್ಲ ಬಿಜೆಪಿಯ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಜೈಲಿಗೆ ಹೋಗುವ ಸಮಯ ಬರುತ್ತದೆ. ದುಬೈ ಮತ್ತು ಮಾರಿಸಸ್​ನಲ್ಲಿ ಆಸ್ತಿ ಮಾಡಿಟ್ಟ ಹಿನ್ನೆಲೆ ವಿಜಯೇಂದ್ರ ಆಗಾಗ ದುಬೈ ಮತ್ತು ಮಾರಿಸಸ್​ಗೆ ಹೋಗುತ್ತಾರೆ. ಯಡಿಯೂರಪ್ಪ ಆಪ್ತ ಉಮೇಶ ಮನೆಯಲ್ಲಿ ಸಿಕ್ಕ 10 ಸಾವಿರ ಕೋಟಿ ರೂ. ಯಡಿಯೂರಪ್ಪ ಮತ್ತು ವಿಜಯೇಂದ್ರಗೆ ಸೇರಿದ್ದು ಎಂದರು.

ಬ್ರಿಟನ್‌ ರಾಣಿಯ ನಂತರ ಸೋನಿಯಾ ಗಾಂಧಿಯೇ ದೊಡ್ಡ ಶ್ರೀಮಂತೆಯಾಗಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ಮಾಡಲು ಕೇಂದ್ರ ಸರಕಾರ ಒತ್ತಡ ಹಾಕಿಲ್ಲ. ಬದಲಾಗಿ ಸುಪ್ರೀಂಕೋರ್ಟ್ ಆದೇಶದಂತೆ ಇಡಿ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

TV9 Kannada


Leave a Reply

Your email address will not be published.