ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

Narendra Modi
Image Credit source: ANI
ನವದೆಹಲಿ: ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಮನ್ಕಿ ಬಾತ್ನಲ್ಲಿ ಈ ವಿಷಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 2ರಿಂದ 15ನೇ ಆಗಸ್ಟ್ವರೆಗೆ ನಾವೆಲ್ಲರೂ ನಮ್ಮ ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ಬದಲಿಸಿಕೊಳ್ಳೋಣವೇ? ತ್ರಿವರ್ಣದ ನಮ್ಮ ರಾಷ್ಟ್ರಧ್ವಜದೊಂದಿಗೆ ನಮ್ಮ ಪ್ರೊಫೈಲ್ ಚಿತ್ರ ಬರುವಂತೆ ಮಾಡೋಣ ಎಂದು ಕರೆ ನೀಡಿದ್ದಾರೆ.