ಸೌತ್​ ಆಫ್ರಿಕಾ ಸರಣಿಯಿಂದ ಕೊನೇ ಕ್ಷಣದಲ್ಲಿ ಹೊರ ನಡೆದ ಕನ್ನಡಿಗ ರಾಹುಲ್​; ಪಂತ್​ಗೆ ನಾಯಕತ್ವ | KL Rahul ruled out of India vs South Africa t20 Series Rishab Pant to lead team


ಐದು ಪಂದ್ಯಗಳ ಸರಣಿಯನ್ನು ಕನ್ನಡಿಗ ಕೆ.ಎಲ್​. ರಾಹುಲ್ ಮುನ್ನಡೆಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರು ಗಾಯಕ್ಕೊಳಗಾದ ಕಾರಣ, ಸರಣಿಯಿಂದಲೇ ಹೊರ ನಡೆದಿದ್ದಾರೆ. ರಿಷಬ್ ಪಂತ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ಐಪಿಎಲ್​ 2022 ಪೂರ್ಣಗೊಳ್ಳುತ್ತಿದ್ದಂತೆ ಅಂತಾರಾಷ್ಟ್ರೀಯ ಪಂದ್ಯಗಳು ಆರಂಭಗೊಳ್ಳುತ್ತಿವೆ. ಈ ಬಾರಿಯ ಐಪಿಎಲ್​ ಬಳಿಕ ಭಾರತ ಸೌತ್​ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಜೂನ್​ 9ರಿಂದ ಪಂದ್ಯ ಆರಂಭಗೊಳ್ಳಲಿದೆ. ಐದು ಪಂದ್ಯಗಳ ಸರಣಿಯನ್ನು ಕನ್ನಡಿಗ ಕೆ.ಎಲ್​. ರಾಹುಲ್ ಮುನ್ನಡೆಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ರಾಹುಲ್ ಗಾಯಕ್ಕೊಳಗಾದ ಕಾರಣ, ಸರಣಿಯಿಂದಲೇ ಹೊರ ನಡೆದಿದ್ದಾರೆ. ರಿಷಬ್ ಪಂತ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಪ್ರಮುಖ ಆಟಗಾರರಾದ ರೋಹಿತ್​ ಶರ್ಮಾ, ವಿರಾಟ್​ ಕೊಹ್ಲಿ ಮೊದಲಾದವರಿಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ, ರಾಹುಲ್​ ಹೆಗಲಿಗೆ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿತ್ತು. ರಾಹುಲ್ ಅವರು ಐಪಿಎಲ್​ನಲ್ಲಿ ಪಂಜಾಬ್​ ಕಿಂಗ್ಸ್ ಹಾಗೂ ಲಖ್ನೋ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಈ ಕಾರಣಕ್ಕೆ ಅವರಿಗೆ ಟಿ20 ಸರಣಿಯ ನಾಯಕತ್ವ ನೀಡಲಾಗಿತ್ತು. ಆದರೆ ಅವರು ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ, ಉಪ ನಾಯಕನ ಸ್ಥಾನದಲ್ಲಿದ್ದ ಪಂತ್ ಅವರಿಗೆ ನಾಯಕತ್ವ ಸಿಕ್ಕಿದೆ. ಐಪಿಎಲ್​ನಲ್ಲಿ ಗುಜರಾತ್​ ಟೈಟನ್​​ ಮೊದಲ ಸೀಸನ್​ನಲ್ಲೇ ಕಪ್ ತಂದು ಕೊಟ್ಟ ಹಾರ್ದಿಕ್​ ಪಾಂಡ್ಯ ಉಪ ನಾಯಕನ ಸ್ಥಾನ ಅಲಂಕರಿಸಿದ್ದಾರೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

TV9 Kannada


Leave a Reply

Your email address will not be published.