ಬೆಂಗಳೂರು: ಲಾಕ್​ಡೌನ್ ವೇಳೆ ಖಾಸಗಿ ಶಾಲೆಗಳಿಂದ ಸ್ಕೂಲ್ ಫೀ ಟಾರ್ಚರ್ ವಿಚಾರವಾಗಿ ರಾಜ್ಯ ಸರ್ಕಾರ ಹೈಕೋರ್ಟ್​​ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ. ಅರ್ಜಿಯಲ್ಲಿ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚನೆ ಬಗ್ಗೆ ಪ್ರಸ್ತಾಪಿಸಿದೆ.

ಕೊರೊನಾ ಲಾಕ್​ಡೌನ್ ವೇಳೆ ಪೋಷಕರಿಗೆ ಸಂಪೂರ್ಣ ಶುಲ್ಕ ಭರಿಸಲು ಕಷ್ಟವಾಗ್ತಿದೆ. ಶುಲ್ಕ ನಿಗದಿ ಮಾಡಲು ಸಮಿತಿ ರಚನೆ ಅಗತ್ಯವೆಂದು ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹೈಕೋರ್ಟ್​​ಗೆ ಮನವಿ ಮಾಡಿದ್ದಾರೆ.

ಖಾಸಗಿ ಶಾಲೆಗಳು ಒಟ್ಟು ಶುಲ್ಕದಲ್ಲಿ ಶೇಕಡ 70 ರಷ್ಟು ಮಾತ್ರ ಪಡೆಯಬೇಕೆಂದು ಸರ್ಕಾರ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್​​ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಮುಗಿಯುವ ತನಕ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಕೋರ್ಟ್ ಸೂಚಿಸಿದೆ. ವಿಚಾರಣೆಯನ್ನ ಜೂನ್ 21ಕ್ಕೆ ನಿಗದಿ ಮಾಡಿದೆ.

The post ಸ್ಕೂಲ್ ಫೀಸ್​​​ ವಿಚಾರ, ರಾಜ್ಯ ಸರ್ಕಾರದಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಕೆ appeared first on News First Kannada.

Source: newsfirstlive.com

Source link