ಎಂ.ಕೆ.ಸ್ಟಾಲಿನ್ ಮತ್ತು ಮಮತಾ ಬ್ಯಾನರ್ಜಿ
ಈ ವರ್ಷದ ಗಣರಾಜ್ಯೋತ್ಸವದಲ್ಲಿ ನಡೆಯುವ ಪರೇಡ್ನಿಂದ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಸ್ತಬ್ಧ ಚಿತ್ರ ಹೊರಗಿಡಲಾಗಿದ್ದು, ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹೀಗೆ ಪತ್ರ ಬರೆದ ಬೆನ್ನಲ್ಲೇ, ಕೇಂದ್ರ ಸರ್ಕಾರ ತಿರುಗಿ ಒಂದು ಖಡಕ್ ಪ್ರಕಟಣೆ ಹೊರಡಿಸಿದೆ. ಗಣರಾಜ್ಯೋತ್ಸವದಲ್ಲಿ ಸ್ತಬ್ಧಚಿತ್ರಗಳನ್ನು ಹೊರಗಿಟ್ಟಿದ್ದು ಕೇಂದ್ರ ಸರ್ಕಾರ ಎಂಬುದು ರಾಜ್ಯ ಸರ್ಕಾರಗಳ ತಪ್ಪು ಕಲ್ಪನೆ. ಕೇಂದ್ರ ಸರ್ಕಾರ ತಮ್ಮ ಪ್ರಾದೇಶಿಕ ಹೆಮ್ಮೆಗೆ ಅವಮಾನ ಮಾಡಿವೆ ಎಂಬರ್ಥದಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು ಪತ್ರಬರೆದಿದ್ದು ಖೇದನೀಯ ಎಂದು ತನ್ನ ಪ್ರಕಟಣೆಯಲ್ಲಿ ಹೇಳಿದೆ.