ಸ್ಥಾನಿಕ ವೈದ್ಯರಿಗೆ ಕೊವಿಡ್ ಭತ್ಯೆ ಲಭ್ಯವಾಗಿಲ್ಲ; ಭರವಸೆ ಈಡೇರಿಸದ ಸರ್ಕಾರದ ವಿರುದ್ಧ ವೈದ್ಯರ ಪ್ರತಿಭಟನೆ | Mysuru Doctors protest against Govt Coronavirus Covid19 details here


ಸ್ಥಾನಿಕ ವೈದ್ಯರಿಗೆ ಕೊವಿಡ್ ಭತ್ಯೆ ಲಭ್ಯವಾಗಿಲ್ಲ; ಭರವಸೆ ಈಡೇರಿಸದ ಸರ್ಕಾರದ ವಿರುದ್ಧ ವೈದ್ಯರ ಪ್ರತಿಭಟನೆ

ಸಾಂದರ್ಭಿಕ ಚಿತ್ರ

ಮೈಸೂರು: ಇಲ್ಲಿನ ಸ್ಥಾನಿಕ ವೈದ್ಯರಿಗೆ ಕೊವಿಡ್​ ಭತ್ಯೆ ಇನ್ನೂ ಲಭ್ಯವಾಗಿಲ್ಲ. ಈ ಕಾರಣದಿಂದ ಮೈಸೂರು ಮೆಡಿಕಲ್​ ಕಾಲೇಜಿನ ಸ್ಥಾನಿಕ ವೈದ್ಯರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ಮೆಡಿಕಲ್ ಕಾಲೇಜು ಆವರಣದಲ್ಲಿ ಮೆರವಣಿಗೆ ಮಾಡಿ, ನಗರದ ಪ್ರಮುಖ ರಸ್ತೆಗಳಲ್ಲಿ ಮೋಂಬತ್ತಿ ಬೆಳಗಿಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಕೊರೊನಾ 2ನೇ ಅಲೆ ಸಂದರ್ಭದಲ್ಲಿ ಕೆಲಸಮಾಡಿದ್ದ ವೈದ್ಯರಿಗೆ 10 ಸಾವಿರ ರೂ. ಭತ್ಯೆ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ, ಇದುವರೆಗೂ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವಿರುದ್ಧ ವೈದ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ವೈದ್ಯರು ಮೆರವಣಿಗೆ ಮಾಡಿದ್ದಾರೆ.

ಕರ್ನಾಟಕ ಕೊರೊನಾ ವರದಿ
ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 30) ಹೊಸದಾಗಿ 291 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,96,148 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,51,492 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,211 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,416 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 185 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,56,452 ಕ್ಕೆ ಏರಿಕೆಯಾಗಿದೆ. 12,56,452 ಸೋಂಕಿತರ ಪೈಕಿ 12,35,281 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,337 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 4,833 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 1, ಬಳ್ಳಾರಿ 1, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 185, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 2, ದಕ್ಷಿಣ ಕನ್ನಡ 19, ದಾವಣಗೆರೆ 1, ಧಾರವಾಡ 9, ಗದಗ 1, ಹಾಸನ 3, ಹಾವೇರಿ 0, ಕಲಬುರಗಿ 1, ಕೊಡಗು 4, ಕೋಲಾರ 1, ಕೊಪ್ಪಳ 2, ಮಂಡ್ಯ 1, ಮೈಸೂರು 28, ರಾಯಚೂರು 0, ರಾಮನಗರ 0, ಶಿವಮೊಗ್ಗ 8, ತುಮಕೂರು 5, ಉಡುಪಿ 7, ಉತ್ತರ ಕನ್ನಡ 1, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಒಮಿಕ್ರಾನ್ ಆತಂಕ: ದೇಶಾದ್ಯಂತ ಕೊರೊನಾ ಕಂಟೇನ್​​ಮೆಂಟ್ ಕಾರ್ಯತಂತ್ರ ಡಿಸೆಂಬರ್ 31ರವರೆಗೆ ವಿಸ್ತರಣೆ

ಇದನ್ನೂ ಓದಿ: ಧಾರವಾಡ: 15 ದಿನಗಳಲ್ಲಿ ಎಸ್​ಡಿಎಮ್​ ಆಸ್ಪತ್ರೆಗೆ ಹೋಗಿ ಬಂದವರಿಗೆ ಕೊರೊನಾ ಪರೀಕ್ಷೆ ಮಾಡಲು ನಿರ್ಧಾರ

TV9 Kannada


Leave a Reply

Your email address will not be published. Required fields are marked *