ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಇತ್ತೀಚೆಗೆ ನಡೆದ ಮದುವೆಯೊಂದರಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗವಹಿಸಿದ್ದರು. ಇದೀಗ ಆ ಮದುವೆಯಲ್ಲಿ ಭಾಗವಹಿಸಿದ್ದ 32 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೆಲವು ದಿನಗಳ ಹಿಂದೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಕಳೆದ ಎರಡು ದಿನಗಳಲ್ಲಿ ಅದೇ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ 32 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

The post ಸ್ಪೀಕರ್ ಕಾಗೇರಿ ಭಾಗಿಯಾಗಿದ್ದ ಮದುವೆಯಲ್ಲಿ ಪಾಲ್ಗೊಂಡಿದ್ದ 32 ಜನರಿಗೆ ಕೊರೊನಾ appeared first on News First Kannada.

Source: newsfirstlive.com

Source link