ನಯನತಾರಾ ಹಾಗೂ ವಿಘ್ನೇಶ್ ಶಿವನ್ ಜೂನ್ 9ರಂದು ಮದುವೆ ಆದರು. ತಮಿಳುನಾಡಿನ ಮಹಾಬಲಿ ಪುರಂನಲ್ಲಿ ಇಬ್ಬರೂ ವಿವಾಹವಾದರು. ಶಾರುಖ್ ಖಾನ್, ರಜನಿಕಾಂತ್ ಸೇರಿ ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕಿದ್ದರು.
ನಯನತಾರಾ (Nayanthara) ಹಾಗೂ ವಿಘ್ನೇಶ್ ಶಿವನ್ ಇತ್ತೀಚೆಗೆ ಮದುವೆ ಆದರು. ಪ್ರೀತಿಸಿ ಮದುವೆ ಆದ ಈ ಜೋಡಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಇತ್ತೀಚೆಗೆ ಹನಿಮೂನ್ಗೆ ವಿದೇಶಕ್ಕೆ ತೆರಳಿದ್ದ ನಯನತಾರಾ-ವಿಘ್ನೇಶ್ ಮರಳಿ ಭಾರತಕ್ಕೆ ಬಂದಿದ್ದರು. ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಈಗ ನಯನತಾರಾ ಮರಳಿ ವಿದೇಶಕ್ಕೆ ಹಾರಿದ್ದಾರೆ. ಪತಿ ವಿಘ್ನೇಶ್ ಶಿವನ್ ಜತೆ ಸ್ಪೇನ್ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ (Vignesh Shivan) ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ಬೋಲ್ಡ್ ಆಗಿದ್ದು ಬಗೆಬಗೆಯಲ್ಲಿ ಕಮೆಂಟ್ಗಳು ಬರುತ್ತಿವೆ.
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಜೂನ್ 9ರಂದು ಮದುವೆ ಆದರು. ತಮಿಳುನಾಡಿನ ಮಹಾಬಲಿ ಪುರಂನಲ್ಲಿ ಇಬ್ಬರೂ ವಿವಾಹವಾದರು. ಶಾರುಖ್ ಖಾನ್, ರಜನಿಕಾಂತ್ ಸೇರಿ ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕಿದ್ದರು. ಈ ಮದುವೆಯ ಫೋಟೋಗಳು ವೈರಲ್ ಆದವು. ಈಗ ವಿಘ್ನೇಶ್ ಹಾಗೂ ನಯನತಾರಾ ಸ್ಪೇನ್ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿವೆ.
ವಿಘ್ನೇಶ್ ಶಿವನ್ ಹಾಗೂ ನಯನತಾರಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರ ಮದುವೆ ವಿಡಿಯೋದ ಪ್ರಸಾರ ಹಕ್ಕನ್ನು ದೊಡ್ಡ ಮೊತ್ತಕ್ಕೆ ನೆಟ್ಫ್ಲಿಕ್ಸ್ ಖರೀದಿ ಮಾಡಿದೆ. ಈ ವಿಡಿಯೋ ಒಟಿಟಿಯಲ್ಲಿ ಇನ್ನಷ್ಟೇ ಪ್ರಸಾರ ಕಾಣಬೇಕಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.
ನೆಟ್ಫ್ಲಿಕ್ಸ್ ಜೊತೆ ಒಪ್ಪಂದ ಆಗಿದ್ದರೂ ಕೂಡ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರು ತಮ್ಮ ಮದುವೆಯ ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದರಿಂದ ನೆಟ್ಫ್ಲಿಕ್ಸ್ ಸಂಸ್ಥೆಯವರು ಗರಂ ಆಗಿದ್ದಾರೆ ಎನ್ನಲಾಗಿತ್ತು. ಹಾಗಾಗಿ ಅವರು ಡೀಲ್ ಕ್ಯಾನ್ಸಲ್ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವದಂತಿ ಹಬ್ಬಿಸಲಾಗಿತ್ತು. ಆದರೆ ಅದು ನಿಜವಲ್ಲ ಎಂದು ಸ್ವತಃ ನೆಟ್ಫ್ಲಿಕ್ಸ್ ಹೇಳಿತ್ತು.