ಸಂಯುಕ್ತ 2, ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರಗಳನ್ನು ನಿರ್ಮಿಸಿದ್ದ ಯುವ ನಟ, ನಿರ್ಮಾಪಕ ಡಿಎಸ್ ಮಂಜುನಾಥ್ ಅವರು ಕೊರೋನಾಗೆ ಬಲಿಯಾಗಿದ್ದಾರೆ. 

0% ಲವ್ ಸಿನಿಮಾ ನಿರ್ಮಿಸಿ ನಟಿಸಿದ್ದ ನಿರ್ಮಾಪಕ ಡಾ. ಡಿ.ಎಸ್. ಮಂಜುನಾಥ್ ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ ಬರೋಬ್ಬರಿ 19 ಸಾವಿರ ಮಂದಿಗೆ ಸೋಂಕು ವಕ್ಕರಿಸಿದೆ. ಇನ್ನು 81 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

Source: Kannadaprabha – ಸಿನಿಮಾ ಸುದ್ದಿ – https://www.kannadaprabha.com/cinema/news/
Read More