ಕನ್ನಡದ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 81 ವರ್ಷವಾಗಿತ್ತು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ತಂದೆ ರುದ್ರಪ್ಪ ಅವರನ್ನ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ 7.30ಕ್ಕೆ ನಿಧನ ಹೊಂದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಆನೇಕಲ್ನ ಕುಂಬಾರ ಹಳ್ಳಿಯಲ್ಲಿ ವಿಜಯ್ ತಂದೆಯ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಜುಲೈನಲ್ಲಿ ವಿಜಯ್ರ ತಾಯಿ ನಾರಾಯಣಮ್ಮ ನಿಧನರಾಗಿದ್ರು.
The post ಸ್ಯಾಂಡಲ್ವುಡ್ ನಟ ದುನಿ ವಿಜಯ್ಗೆ ಪಿತೃ ವಿಯೋಗ appeared first on News First Kannada.