ಪೇಜಾವರ ಶ್ರೀಗಳು ದಲಿತರ ಕೇರಿಕೆ ಭೇಟಿ ಕೊಟ್ಟಾಗ.. ದಲಿತರು ಕೊಟ್ಟ ಕೋಳಿನಾ ತಿಂತಾರಾ? ಕುರಿ ರಕ್ತ ಕುಡಿತಾರಾ? ಅನ್ನೋ ಪ್ರಶ್ನೆ ಕೇಳಿದ್ದ ಸಂಗೀತ ನಿರ್ದೇಶಕ ಹಂಸಲೇಖರ ಮಾತಿಗೆ ಪೇಜಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಉಡುಪಿಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳಾದ ವಿಶ್ವ ಪ್ರಸನ್ನ ತೀರ್ಥರು, ನನ್ನ ಗುರುಗಳು ಸಮಾಜದ ಎಲ್ಲರ ಹೃದಯದಲ್ಲಿ ಕಷ್ಣನನ್ನು ಕಂಡವರು. ಆದ್ದರಿಂದಲೇ ಅವರು ದಲಿತರ ಕೇರಿಗೂ ಹೋಗುತ್ತಿದ್ದರು..ನೆರೆಹಾವಳಿ ಭೂಕಂಪ ಆದಾಗಲೂ ಭೇಟಿ ನೀಡುತ್ತಿದ್ದರು. ಸಮಾಜದ ಎಲ್ಲರ ಉದ್ಧಾರವನ್ನು ವಿಶ್ವೇಶತೀರ್ಥರು ಬಯಸಿದ್ದರು.. ಗುರುಗಳು ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಉತ್ತರ ನೀಡುತ್ತಾನೆ. ನಮ್ಮ ಉದ್ದೇಶ ಪ್ರಾಮಾಣಿಕವಾಗಿದೆ. ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಿಸುವುದಿಲ್ಲ. ಯಾರ ಹೊಗಳಿಕೆಗೂ ನಾವು ಈ ಕೆಲಸವನ್ನು ಮಾಡಿದ್ದಲ್ಲ, ಹೀಗಾಗಿ ಯಾರೋ ತೆಗಳಿದ್ರು ಅಂತ ನಮ್ಮ ಕಾರ್ಯವನ್ನು ನಿಲ್ಲಿಸೋದೂ ಇಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ಇದನ್ನೂ ಓದಿ: ಪೇಜಾವರ ಶ್ರೀಗಳು ದಲಿತರ ಮನೆಯಲ್ಲಿ ಕೋಳಿ ತಿಂತಾರಾ? ಕುರಿ ರಕ್ತ ಕುಡಿತಾರಾ? ಹಂಸಲೇಖ ಪ್ರಶ್ನೆ
ಅಲ್ಲದೇ, ಇಂಥ ಮಾತುಗಳು ಹಂಸಲೇಖ ಅವರಿಂದ ಬರಬಾರದಿತ್ತು. ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ. ಪ್ರಚಾರಕ್ಕೋಸ್ಕರ ಹೀಗೆ ಸಾಕಷ್ಟು ಮಂದಿ ಮಾಡ್ತಾರೆ, ಆದ್ರೆ ಹಂಸ ಲೇಖರಿಗೆ ಇದರಿಂದ ಪ್ರಚಾರ ಬೇಕಿರಲಿಲ್ಲ ಎಂದು ಹೇಳಿದ್ದಾರೆ.
ದಲಿತರು ನಮ್ಮಿಂದ ಹೊರತಲ್ಲ
ದಲಿತರ ಜೊತೆ ನಾವು ಇದ್ದೇವೆ, ದಲಿತರು ನಮ್ಮಿಂದ ಹೊರತಲ್ಲ.. ಈ ಐಕ್ಯ ಸಂದೇಶ ನೀಡುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ.. ಗುರುಗಳ ಮೇಲಿನ ಅಭಿಮಾನದಿಂದ ಯಾರಾದರೂ ಪ್ರತಿಭಟಿಸಿದರೆ ಅದು ಅವರವರ ವೈಯಕ್ತಿಕ ವಿಚಾರ ಅಂತಲೂ ಹೇಳಿದ್ದಾರೆ.
ಇದನ್ನೂ ಓದಿ: ದಲಿತರ ಮನೆಯಲ್ಲಿ ಪೇಜಾವರ ಶ್ರೀ ಕೋಳಿ ತಿಂತಾರಾ ಹೇಳಿಕೆ; ಕ್ಷಮೆ ಕೇಳಿದ ‘ಮಹಾಗುರು’