ಮಂಗಳೂರು: ನಗರದ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಅಭಿಯಾನದ ಅಂಗವಾಗಿ ಶಾಸಕ ಡಾ.ವೈ.ಭರತ್ ಶೆಟ್ಟಿ ಬಡಗ ಉಳೇಪಾಡಿ ತಮ್ಮಯ್ಯ ಪೂಜಾರಿಯವರ ಜಮೀನಿನಲ್ಲಿ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಚಾಲನೆ ನೀಡಿದರು.

ಕೃಷಿ ಇಲಾಖೆಯ ಮೂಲಕ ಈ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಈಗಾಗಲೇ ಶಾಸಕರು ಈ ಕುರಿತು ವಿವಿಧ ಪಂಚಾಯಿತಿಗಳಲ್ಲಿ ಸರಣಿ ಸಭೆಗಳ ಮೂಲಕ ಜಾಗೃತಿ ಮತ್ತು ಯೋಜನೆಯ ಪ್ರಯೋಜನವನ್ನು ತಿಳಿಸುತ್ತಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ವಿಶ್ವನಾಥ ಶೆಟ್ಟಿ, ಸ್ಥಳೀಯ ಪಂಚಾಯತ್ ಅಧ್ಯಕ್ಷ ನೋಣಯ್ಯ ಕೋಟ್ಯಾನ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೋಹನ್ ಅತಿಕಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಗುರುಪುರ, ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಮಟ್ಟದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ವೀಣಾ ರೈ, ಸಿಎಚ್‍ಎಸ್‍ಸಿ ಕೇಂದ್ರದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.

The post ಹಡಿಲು ಗದ್ದೆಯ ಉಳುಮೆ- ಟ್ರ್ಯಾಕ್ಟರ್ ಚಲಾಯಿಸಿ ಉದ್ಘಾಟಿಸಿದ ಭರತ್ ಶೆಟ್ಟಿ appeared first on Public TV.

Source: publictv.in

Source link