ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಸಂಸದೆ ಸುಮಲತಾ: ಬೆಲ್ಲದ ಮೇಲಿನ ಜಿಎಸ್ಟಿ ತೆರಿಗೆ ಮರುಪರಿಶೀಲಿಸುವಂತೆ ಮನವಿ | MP Sumalatha meets Finance Minister Nirmala Sitharaman and Requests to review GST tax on jaggery


ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಬೆಲ್ಲದ ಮೇಲಿನ ಜಿಎಸ್ಟಿ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಸಂಸದೆ ಸುಮಲತಾ: ಬೆಲ್ಲದ ಮೇಲಿನ ಜಿಎಸ್ಟಿ ತೆರಿಗೆ ಮರುಪರಿಶೀಲಿಸುವಂತೆ ಮನವಿ

ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಂಸದೆ ಸುಮಲತಾ

ದೆಹಲಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಇಂದು (ಆಗಸ್ಟ್ 4) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್( Nirmala Sitharaman) ಅವರನ್ನು ಭೇಟಿ ಮಾಡಿ ಬೆಲ್ಲದ ಮೇಲೆ 5% #GST ತೆರಿಗೆ ವಿಧಿಸಿರುವುದನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.

ಇತ್ತೀಚೆಗಷ್ಟೇ ಪ್ಯಾಕ್ ಆದ ಆಹಾರ ಪದಾರ್ಥಗಳು ಮತ್ತು ಡೇರಿ ಉತ್ಪನ್ನಗಳ ಮೇಲೆ ಶೇ 5ರಷ್ಟು ಜಿಎಸ್ಟಿ ವಿಧಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದಕ್ಕೆ ದೇಶದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಸದ್ಯ ಈಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಬೆಲ್ಲದ ಮೇಲಿನ ಜಿಎಸ್ಟಿ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ತಮ್ಮ ಖಾತೆಯಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.

ಇಂದು ಕೇಂದ್ರ ಹಣಕಾಸು ಸಚಿವಾರದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಬೆಲ್ಲದ ಮೇಲೆ 5% #GST ತೆರಿಗೆ ವಿಧಿಸಿರುವುದನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದೆ. ಅಲ್ಲದೆ ಮಂಡ್ಯ ಮತ್ತು ರಾಜ್ಯದ ಕಬ್ಬು ಬೆಳೆಯುವ ರೈತರ ಸಂಕಷ್ಟಗಳ ಕುರಿತು ಮನವರಿಕೆ ಮಾಡಿಕೊಟ್ಟೆ.

ಬೆಲ್ಲ ತಯಾರಿಸುವ ಘಟಕಗಳ ವಸ್ತುಸ್ಥಿತಿ ಹಾಗೂ ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಬೇರೆ ರಾಜ್ಯಗಳನ್ನು ಹೋಲಿಸಿದಾಗ ನಮ್ಮ ಕಬ್ಬು ಬೆಳೆಗಾರರಿಗೆ ಕಬ್ಬಿನ ಮೇಲೆ ಅತೀ ಕಡಿಮೆಯ FRP ದರ ಸಿಗುವ ಬಗ್ಗೆಯೂ ಮನವರಿಕೆ ಮಾಡಿಕೊಟ್ಟೆ. ನನ್ನೆಲ್ಲಾ ಕೊರಿಕೆಗಳಿಗೆ ಸಕರಾತ್ಮವಾಗಿ ಸ್ಪಂದಿಸಿದ ಮಾನ್ಯ ಸಚಿವರು GST ಪರಿಷತ್ತಿನ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮಾನ್ಯ ಸಚಿವರ ಸಕಾರಾತ್ಮಕ ಸ್ಪಂದನೆಗೆ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತಾ, ಬೆಲ್ಲ ತಯಾರಿಸುವ ರೈತರಿಗೆ ಆದಷ್ಟು ಬೇಗ ಪರಿಹಾರ ದೊರಕಿಸುವ ಭರವಸೆಯಲ್ಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *