ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಧ್ಯೆ ಹಳೇ ಮೈಸೂರು ಭಾಗದಲ್ಲಿ ಆಪರೇಷನ್ ಕಮಲದ ಬಗ್ಗೆ ಬಿಜೆಪಿ ವಿಧಾನಪರಿ ಷರಿಷತ್ ಸದಸ್ಯ ಸ್ಫೋಟಕ ಸುಳಿವು ಕೊಟ್ಟಿದ್ದಾರೆ.

ಸುಮಲತಾ ಅಂಬರೀಶ್
Image Credit source: Sumalatha Ambareesh
ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಂಡ್ಯ ಪ್ರವಾಸ ರಾಜ್ಯ ಬಿಜೆಪಿಯಲ್ಲಿ (BJP) ಚುನಾವಣೆ ಚಟುವಟಿಕೆಗಳು ಬಿರುಸುಗೊಂಡಿವೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿರುವ ಬಿಜೆಪಿ, ಸ್ಥಳೀಯ ಪ್ರಬಾವಿ ನಾಯಕರಿಗೆ ಗಾಳ ಹಾಕಿದೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್(CP Yogeshwar) ಆ ಭಾಗದಲ್ಲಿ ಆಪರೇಷನ್ ಕಮಲದ (Operation Kamala) ಸ್ಪೋಟಕ ಸುಳಿವು ಕೊಟ್ಟಿದ್ದಾರೆ. ಅದರಲ್ಲೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರ ರಾಜಕೀಯ ನಡೆ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.