ಶಿವಮೊಗ್ಗ: ಕಳೆದ ನಾಲ್ಕು ದಿನಗಳ ಹಿಂದೆ‌ಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಇಂದು ಕೊರೊನಾಗೆ ಬಲಿಯಾಗಿದ್ದಾರೆ.

ಜಿಲ್ಲೆಯ ಮಲವಗೊಪ್ಪದ ನವವಧು ಪೂಜಾ ಕೋವಿಡ್​ಗೆ ಬಲಿಯಾಗಿದ್ದಾರೆ. ಪೂಜಾ ಅವರ ವಿವಾಹ ಕಳೆದ ನಾಲ್ಕು ದಿನಗಳ ಹಿಂದೆ ಅಂದರೆ ಮೇ 24 ರಂದು ಹರಿಗೆಯ ಮಹೇಶ್ ಅವರೊಂದಿಗೆ ನಡೆದಿತ್ತು. ಮದುವೆಯ ಮರು ದಿನದಿಂದಲೇ ಪೂಜಾಗೆ ಸ್ವಲ್ಪ ಜ್ವರ ಕಾಣಿಸಿಕೊ‌ಂಡಿತ್ತು ಎನ್ನಲಾಗಿದೆ. ಆದರೆ ಸ್ಥಳೀಯ ಕ್ಲಿನಿಕ್​ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಪೂಜಾಗೆ, ಇಂದು ಜ್ವರ ಜಾಸ್ತಿಯಾದ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ.

 

The post ಹಸೆಮಣೆ ಏರಿದ ನಾಲ್ಕೇ ದಿನಕ್ಕೆ ವಧು ಕೊರೊನಾಗೆ ಬಲಿ: ಮದುವೆ ಮನೆಯಲ್ಲೀಗ ಸೂತಕದ ಛಾಯೆ appeared first on News First Kannada.

Source: newsfirstlive.com

Source link