ಹಾದಿಯೇ ತೋರಿದ ಹಾದಿ: ಈ ‘ಅರಸು’ ಆಳಾಗಿ ದುಡಿಯಲು ಸಿದ್ಧನಿದ್ದಾನೆ | Haadiye Torida Haadi Story of Handicap Arasu by Jyothi S


ಹಾದಿಯೇ ತೋರಿದ ಹಾದಿ: ಈ ‘ಅರಸು’ ಆಳಾಗಿ ದುಡಿಯಲು ಸಿದ್ಧನಿದ್ದಾನೆ

ಅರಸು ಮತ್ತವನ ಕುಟುಂಬ

ಹಾದಿಯೇ ತೋರಿದ ಹಾದಿ | Haadiye Torida Haadi : ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ ಎನ್ನುವ ಅರಸು ಈಗ ವಾಸವಿರುವುದು ಬೆಂಗಳೂರಿನ ಬಾಗಲೂರು ಕ್ರಾಸ್, ದ್ವಾರಕಾನಗರದ ಹತ್ತಿರ. ವಾಸುದೇವ ಮತ್ತು ಮೇರಿಯಮ್ಮ ದಂಪತಿಯ ಆರು ಜನರು ಮಕ್ಕಳಲ್ಲಿ ಮೊದಲನೇ ಮಗುವಾಗಿ ಹುಟ್ಟಿದ್ದು ಅರಸು. ‘ನಾನು ಕಷ್ಟಪಟ್ಟು ಕೆಲಸ ಮಾಡುತ್ತೇನೆ ಎಂದರೂ ಯಾರೂ ಕೆಲಸ ಕೊಡುತ್ತಿಲ್ಲ. ತರಕಾರಿ ಹೆಚ್ಚುವುದು, ಹೋಟೆಲಿನಲ್ಲಿ ಸರ್ವಿಸ್ ಮಾಡುವುದು, ಪಾತ್ರೆ ತೊಳೆಯುವುದು ಮಾಡುತ್ತೇನೆ. ಜೊತೆಗೆ ರೋಟಿ, ಪೂರಿ, ದೋಸೆ, ವಡೆ, ಭಜ್ಜಿ ಮತ್ತು ಆಮ್ಲೆಟ್, ಕಬಾಬ್ ಹಾಕುವುದು, ಬಿರಿಯಾನಿ ಈ ತರಹದ ಎಲ್ಲಾ ಅಡುಗೆ ಕೆಲಸವನ್ನು ಕಲಿತಿದ್ದೇನೆ. ನಮ್ಮಮ್ಮ ಹೇಳ್ತಿದ್ರು ನಾನು ಹುಟ್ಟಿ ಮೂರು ತಿಂಗಳ ಮಗು ಇರುವಾಗ ಯಾವುದೊ ಜ್ವರ ಬಂದು ಕಾಲಿನ ನರ ಹಾಗೂ ಸೊಂಟ ದುರ್ಬಲವಾದವು. ಸ್ವಲ್ಪ ದೂರ ನಡೆದುಕೊಂಡು ಹೋಗುವಾಗ ಒಂದು ಸಣ್ಣ ಕಲ್ಲನ್ನು ಎಡವಿದರೂ ಬಿದ್ದುಬಿಡುತ್ತೇನೆ. ದೇಹವನ್ನು ಬ್ಯಾಲೆನ್ಸ್ ಮಾಡಲು ಸಾಧ್ಯವಾಗುವುದಿಲ್ಲ. ಆಗ ಬೆಲೆ ಕಡಿಮೆ ಇತ್ತು. ಹೊಟ್ಟೆ ತುಂಬ ಊಟ ಸಿಕ್ತಿತ್ತು. ಈಗ ನಾನು ಕೆಲಸ ಮಾಡ್ತೇನೆ ಅಂದರೂ ಯಾರೂ ಕೆಲಸ ಕೊಡುತ್ತಿಲ್ಲ. ಭಿಕ್ಷೆ ಬೇಡಿ ತಿನ್ನಲು ಮನಸ್ಸು ಒಪ್ಪುವುದಿಲ್ಲ. ಭಿಕ್ಷೆ ಬೇಡಿ ಮೂರು ಹೊತ್ತು ತಿನ್ನುವುದಕ್ಕಿಂತ ಕಷ್ಟಪಟ್ಟು ದುಡಿದು ಒಂದು ಹೊತ್ತು ತಿನ್ನೋಣ’ ಎನ್ನುತ್ತಾರೆ ಅರಸು.
ಜ್ಯೋತಿ. ಎಸ್, ಸಿಟೆಝೆನ್ ಜರ್ನಲಿಸ್ಟ್​, (Jyothi S)

(ಹಾದಿ 15)

ನಾನು ಓದಿಲ್ಲ. ನಾನು ನನ್ನ ಎಂಟನೇ ವಯಸ್ಸಿನಿಂದ ಹೋಟೆಲ್​ಗಳಲ್ಲಿ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡು ಬದುಕು ಸಾಗಿಸಿಕೊಂಡು ಬಂದವನು. ರಜೆ ಇದ್ದಾಗ ಮನೆಯಿಂದ ಹೊರಗೆ ಬರುತ್ತಿದ್ದೆ. ಕೆಲವರು ಚೆನ್ನಾಗಿ ಮಾತನಾಡಿಸುತ್ತಿದ್ದರು, ಊಟ ಕೊಡುತ್ತಿದ್ದರು. ಕೆಲವರು ನಮ್ಮನೆ ಹತ್ತಿರ ಕುಂಟ್ಕೊಂಡ್ ಕುಂಟ್ಕೊಂಡ್ ಬರ್ತಾನೆ ಅಂತ ಬೇಜಾರ್ ಮಾಡಿಕೊಳ್ಳುತ್ತಿದ್ದರು. ನಾನು ಬರುತ್ತಿದ್ದೇನೆ ಅಂತ ಗೊತ್ತಾಗುವಷ್ಟರಲ್ಲಿ ಮನೆ ಬಾಗಿಲು ಹಾಕುತ್ತಿದ್ದರು. ಕುಂಟ ಅಂತ ರೇಗಿಸುತ್ತಿದ್ದರು. ನನ್ನ ನೋಡಿ ನಗುತ್ತಿದ್ದರು. ನಾನೇನಾದರೂ ಅವರ ವಿರುದ್ಧ ಪ್ರಶ್ನೆ ಮಾಡಿದರೆ ಏನಾದರೂ ಕೇಳಿದರೆ ನೋಡು ಕುಂಟ ಆದರೂ ಎಷ್ಟು ಜಂಬ ಅಂತ ಅಣಕಿಸುತ್ತಿದ್ದರು. ಹಾಗಾಗಿ ಮರು ಪ್ರಶ್ನಿಸದೆ ನನ್ನ ಪಾಡಿಗೆ ನಾನು ಇರುತ್ತಿದ್ದೆ.

ಹೋಟೆಲ್ ಒಂದರಲ್ಲಿ ತಟ್ಟೆ ತೊಳೆಯುವುದು, ಸರ್ವಿಸ್ ಮಾಡುವುದು, ಟೇಬಲ್ ಸ್ವಚ್ಛ ಮಾಡುವುದು, ತರಕಾರಿ ಕತ್ತರಿಸುವುದು ಮಾಡುತ್ತಿದ್ದೆ. ಹೀಗೆ ಒಂದೇ ಕೆಲಸ ಅಂತ ಇಲ್ಲ. ಎಲ್ಲಾ ಕೆಲಸ ಮಾಡಿಸುತ್ತಿದ್ದರು. ನೀರಿನಲ್ಲಿ ಹೆಚ್ಚು ಕೆಲಸ ಮಾಡುತ್ತಿದ್ದರಿಂದ ಕಾಲು ಕೊಳೆಯಲು ಪ್ರಾರಂಭವಾಯ್ತು. ಆಗ ಅಲ್ಲಿದ್ದವರೆಲ್ಲ ಔಷಧಿ ಕೊಡಿಸಿ ಇಲ್ಲಿ ಕೆಲಸ ಬಿಟ್ಟು ಬೇರೆ ಕಡೆಗೆ ಹೋಗು ಎನ್ನುತ್ತಿದ್ದರು. ಅಷ್ಟು ಹೊತ್ತಿಗೆ ನಾನು ಚಪಾತಿ, ಪೂರಿ, ರೋಟಿ, ಬಜ್ಜಿ, ವಡೆ, ಕಬಾಬ್, ಆಮ್ಲೆಟ್, ಬಿರಿಯಾನಿ ಮಾಡುವ ಅಡುಗೆ ಕೆಲಸವನ್ನು ಕಲಿತಿದ್ದೆ. ಆಗ ಸ್ವಲ್ಪ ಧೈರ್ಯ ಇಲ್ಲಿ ಕೆಲಸ ಬಿಟ್ಟು ಹೋದರೂ ಬೇರೆ ಕಡೆ ಕೆಲಸ ಮಾಡಿ ಜೀವನ ಸಾಗಿಸಬಹುದು ಎಂಬ ನಂಬಿಕೆ ಬಂದಿತ್ತು. ಅಲ್ಲಿಂದ ಹೊರಬಂದಾದ ಮೇಲೆ ಗುಟ್ಟಹಳ್ಳಿ, ಬಿ. ಡಿ. ಎ. ಆಫೀಸ್ ಹತ್ತಿರ ಸಣ್ಣ ಪುಟ್ಟ ಕೆಲಸಗಳನ್ನು ಮಾಡುತ್ತಿದ್ದೆ. ತರುವಾಯ ಪ್ಯಾಲೇಸ್ ಗ್ರೌಂಡ್ ಹತ್ತಿರ ಕಟೌಟ್ ಪೇಂಟಿಂಗ್ ಅಂಗಡಿಯಲ್ಲಿ ಸಹಾಯಕನಾಗಿ ಕೆಲಸಕ್ಕೆ ಸೇರಿಕೊಂಡೆ. ಅಲ್ಲಿ ಒಂದೂವರೆ ವರ್ಷ ಕೆಲಸ ಮಾಡಿದೆ.

ಐದು ವರ್ಷದ ಹಿಂದೆ ಮುನಿಯಮ್ಮ ಎಂಬುವವರನ್ನು ಮದುವೆ ಮಾಡಿಕೊಂಡೆ. ಈಗ ಮಗಳು ಜಾಸ್ಮಿನ್ ನನ್ನ ಕಷ್ಟದಲ್ಲಿ ತುಸು ನಗುವನ್ನು ಮೂಡಿಸಲು ಜೊತೆಯಾಗಿದ್ದಾಳೆ. ಎರಡು ವರ್ಷದ ಹಿಂದೆ ಆರ್. ಟಿ. ನಗರದ ಹೋಟೆಲ್ ಒಂದರಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದೆ. ಕೋವಿಡ್ ಬಂದ ಮೇಲೆ ಹೋಟೆಲ್ ವ್ಯಾಪಾರವೂ ಕಡಿಮೆಯಾಯ್ತು. ಹೋಟೆಲ್ ನಷ್ಟದಲ್ಲಿ ನಡೆಯುತ್ತಿದ್ದರಿಂದ ಬೇರೆಯವರಿಗೆ ಮಾರಿದರು.

TV9 Kannada


Leave a Reply

Your email address will not be published.