ಹಾನಗಲ್ ವಿಧಾನಸಭೆ​​ ಕ್ಷೇತ್ರದ ಚುನಾವಣೆಗೆ JDS​ ರೆಡಿ; ಅಭ್ಯರ್ಥಿ ಘೋಷಣೆ

ಹಾನಗಲ್ ವಿಧಾನಸಭೆ​​ ಕ್ಷೇತ್ರದ ಚುನಾವಣೆಗೆ JDS​ ರೆಡಿ; ಅಭ್ಯರ್ಥಿ ಘೋಷಣೆ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿಯಾಜ್ ಶೇಖ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

ನಿಯಾಜ್ ಶೇಖ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ನಿಯಾಜ್ ಶೇಖ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಯ್ಯದ್ ಅಲ್ತಾ ಉಪಸ್ಥಿತರಿದ್ದರು. ನಿಯಾಜ್ ಶೇಖ್ ಅವರು ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಕಳೆದ ವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ.ಎಂ.ಉದಾಸಿ ಅವರು ನಿಧಾನರಾದ ಹಿನ್ನೆಲೆಯಲ್ಲಿ ತೆರವಾಗಿರುವ ಈ ಕ್ಷೇತ್ರಕ್ಕೆ ಉಪಚುನಾವಣೆ ಸದ್ಯದಲ್ಲೇ ನಡೆಯಲಿದೆ. ಜೆಡಿಎಸ್‍ನಿಂದ ನಿಯಾಜ್ ಶೇಖ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ.

The post ಹಾನಗಲ್ ವಿಧಾನಸಭೆ​​ ಕ್ಷೇತ್ರದ ಚುನಾವಣೆಗೆ JDS​ ರೆಡಿ; ಅಭ್ಯರ್ಥಿ ಘೋಷಣೆ appeared first on News First Kannada.

Source: newsfirstlive.com

Source link